ಬೆಳಗಾವಿ ಕೆಕೆ ಕೊಪ್ಪದಲ್ಲಿ ₹30 ಲಕ್ಷ ವೆಚ್ಚದಲ್ಲಿ ವಿಠ್ಠಲ ರುಕ್ಮಾಯಿ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ
ಬೆಳಗಾವಿ, 23 ಅಕ್ಟೋಬರ್ (ಹಿ.ಸ.): ಜಿಲ್ಲೆಯ ಕೆಕೆ ಕೊಪ್ಪ ಗ್ರಾಮದಲ್ಲಿ ಸುಮಾರು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ


ಬೆಳಗಾವಿ, 23 ಅಕ್ಟೋಬರ್ (ಹಿ.ಸ.):

ಜಿಲ್ಲೆಯ ಕೆಕೆ ಕೊಪ್ಪ ಗ್ರಾಮದಲ್ಲಿ ಸುಮಾರು ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸುವ ಉದ್ದೇಶದಿಂದ ದೇವಸ್ಥಾನದ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯ ಸಕ್ರಿಯ ಸಹಭಾಗಿತ್ವದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

ದೇವಸ್ಥಾನ ಪೂರ್ಣಗೊಂಡ ಬಳಿಕ ಗ್ರಾಮಸ್ಥರ ಪೂಜೆ, ಧಾರ್ಮಿಕ ಆಚರಣೆಗಳು, ಹಬ್ಬ-ಹರಿದಿನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರಮುಖ ಕೇಂದ್ರವಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ದೇವಸ್ಥಾನಗಳು ಧಾರ್ಮಿಕ ಕೇಂದ್ರಗಳಾಗಿರುವುದರ ಜತೆಗೆ ಜನರನ್ನು ಒಗ್ಗೂಡಿಸುವ ಮತ್ತು ಪರಂಪರೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕೆಕೆ ಕೊಪ್ಪದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನವು ಗ್ರಾಮದ ಧಾರ್ಮಿಕ ಹಾಗೂ ಸಾಮಾಜಿಕ ಜೀವನಕ್ಕೆ ಮಹತ್ವದ ಕೊಡುಗೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪಾವನಕ್ಷೇತ್ರ ಸೋಮೇಶ್ವರ ಮಂದಿರದ ಪರಮಪೂಜ್ಯ ಭೀಮ ಅಜ್ಜನವರು, ಮಹಾದೇವ್ ಸಂಬರಗಿ, ಗದಗಯ್ಯ ಹಿರೇಮಠ, ಶಿವನಪ್ಪ ಗೋಡಲಕುಂದರಗಿ, ನಾಗರಾಜ ಗುಂಡುಗೋಳ, ನಾಗಪ್ಪ ಹುಲಿಕವಿ, ಸೋಮಪ್ಪ ದುರ್ಗಿ, ಸಂತೋಷ್ ಕಂಬಿ, ಸೋಮಜ್ಜ ಬಸನ್ನವರ್, ರಾಯಪ್ಪ ಕರೆಣ್ಣವರ್, ಚಂಬಯ್ಯ ಹಿರೇಮಠ, ಬಸವರಾಜ ಡೊಂಗರಗಾಂವಿ, ಸುವರ್ಣ ಅಕ್ಕ ಪಾಟೀಲ, ಸುರೇಶ ಕುಡೇನಟ್ಟಿ ಸೇರಿದಂತೆ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande