
ಗದಗ, 23 ಅಕ್ಟೋಬರ್ (ಹಿ.ಸ.):
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಗಣ್ಯರು ಹಾಗೂ ಅಧಿಕಾರಿಗಳು ವೀರರಾಣಿ ಕಿತ್ತೂರು ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ವಿ. ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP