
ಕೋಲಾರ, ೨೪ ಅಕ್ಟೋಬರ್ (ಹಿ.ಸ) : ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ ಪರಿಷತ್ತಿನ ಅಧ್ಯಕ್ಷ ಗೋ.ನಾ. ಸ್ವಾಮಿ ಅವರಿಗೆ ೨೦೨೬-೨೭ನೇ ಸಾಲಿನ ಕಲಾದರ್ಪಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಲಾದರ್ಪಣ ಸಂಸ್ಥೆಯು ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಸಾಲಿನ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಗೋ.ನಾ. ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
ಜಾನಪದ ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಗೋ.ನಾ. ಸ್ವಾಮಿ ಅವರ ಆಯ್ಕೆಯು ಸುಗಟೂರು ಗ್ರಾಮ ಹಾಗೂ ಕೋಲಾರ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.
ನವೆAಬರ್ ೧೪ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕಲಾದರ್ಪಣ ಸಂಸ್ಥೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್