
ಬೆಂಗಳೂರು, 24 ಅಕ್ಟೋಬರ್ (ಹಿ.ಸ.):
ಭಾರತವು ಪೋಲಿಯೋ ಮುಕ್ತ ದೇಶವಾಗಿ ಹೊರಹೊಮ್ಮಿದ್ದರೂ, ಈ ಸಾಧನೆಯನ್ನು ಶಾಶ್ವತವಾಗಿ ಕಾಪಾಡಿಕೊಳ್ಳಲು ನಿರಂತರ ನಿಗಾ ಮತ್ತು ಸಮಗ್ರ ಲಸಿಕಾ ಅಭಿಯಾನ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಶ್ವ ಪೋಲಿಯೋ ದಿನದ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕೇವಲ ಎರಡು ಹನಿ ಲಸಿಕೆ ಮಗುವಿನ ಇಡೀ ಬದುಕಿಗೆ ರಕ್ಷೆಯಾಗುತ್ತದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದ್ದಾರೆ.
ಪ್ರತಿ ಮಗುವಿಗೂ ಲಸಿಕೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ನಿಸ್ವಾರ್ಥ ಶ್ರಮವೇ ಈ ಯಶಸ್ಸಿನ ಮೂಲಶಕ್ತಿಯಾಗಿದೆ. ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.