ನೊಣವಿನಕೆರೆ ಶ್ರೀಗಳಿಂದ ಬಳ್ಳಾರಿಯ ಕನಕ ದುರ್ಗಮ್ಮಗೆ ಪೂಜೆ
ಬಳ್ಳಾರಿ, 24 ಅಕ್ಟೋಬರ್ (ಹಿ.ಸ.) ನೊಣವಿನಕೆರೆಯ ಶಿವಾನುಭವ ಚರವರ್ಯ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಬಳ್ಳಾರಿಯ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಹಿತಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳ್ಳಾರಿ
ನೊಣವಿನಕೆರೆ ಶ್ರೀಗಳಿಂದ ಬಳ್ಳಾರಿಯ ಕನಕ ದುರ್ಗಮ್ಮಗೆ ಪೂಜೆ


ನೊಣವಿನಕೆರೆ ಶ್ರೀಗಳಿಂದ ಬಳ್ಳಾರಿಯ ಕನಕ ದುರ್ಗಮ್ಮಗೆ ಪೂಜೆ


ನೊಣವಿನಕೆರೆ ಶ್ರೀಗಳಿಂದ ಬಳ್ಳಾರಿಯ ಕನಕ ದುರ್ಗಮ್ಮಗೆ ಪೂಜೆ


ಬಳ್ಳಾರಿ, 24 ಅಕ್ಟೋಬರ್ (ಹಿ.ಸ.)

ನೊಣವಿನಕೆರೆಯ ಶಿವಾನುಭವ ಚರವರ್ಯ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಬಳ್ಳಾರಿಯ

ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಹಿತಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಪಿ. ಗಾದೆಪ್ಪ ಮತ್ತು ಅವರ ಕುಟುಂಬದ ಸದಸ್ಯರು ಪೂರ್ಣಕುಂಭ ಸ್ವಾಗತ ಕೋರಿ, ದೇವಿಯ ದರ್ಶನ ಮತ್ತು ವಿಶೇಷ ಪೂಜೆಯ ನೇತೃತ್ವವಹಿಸಿದ್ದರು.

ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು, ಭಕ್ತರ ಅಭಿಲಾಷೆಯ ಮೇರೆಗೆ ಬಳ್ಳಾರಿಗೆ ಬಂದು, ನಗರದ ಅಧಿದೇವತೆ ಶ್ರೀಕನಕ ದುರ್ಗಮ್ಮ ದೇವಸ್ಥಾನದಲ್ಲಿ ನಾಡಿನ ಒಳಿತೆಗೆ ಕೋರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಒಳ್ಳೆಯ ಮಳೆ, ಬೆಳೆ ಇದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande