ರಸ್ತೆ, ಸೇತುವೆ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ
ಬೆಳಗಾವಿ, 24 ಅಕ್ಟೋಬರ್ (ಹಿ.ಸ.): ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಸುಮಾರು ₹7 ಕೋಟಿ ವೆಚ್ಚದ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಭೂಮಿಪೂಜೆ ನೆರವೇರಿಸಿ
ಭೂಮಿ ಪೂಜೆ


ಬೆಳಗಾವಿ, 24 ಅಕ್ಟೋಬರ್ (ಹಿ.ಸ.):

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಸುಮಾರು ₹7 ಕೋಟಿ ವೆಚ್ಚದ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಿಜಗರಣಿ-ಬಡಸ್-ಬಾಕನೂರು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ, ಬಾಕನೂರು-ಗೋಲ್ಯಾಳಿ ಸಂಪರ್ಕ ರಸ್ತೆ ಹಾಗೂ ಬಿಜಗರಣಿ-ಜಾನೇವಾಡಿ ಮತ್ತು ಜಾನೇವಾಡಿ-ಕರ್ಲೆ ಸಂಪರ್ಕ ರಸ್ತೆ ಕಾಮಗಾರಿಗಳು ಇದರಲ್ಲಿ ಸೇರಿವೆ.

ಬಿಜಗರಣಿ-ಬಡಸ್-ಬಾಕನೂರು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಸುಮಾರು ₹2 ಕೋಟಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಗೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿಪೂಜೆ ನೆರವೇರಿಸಿದರು. ಗ್ರಾಮಸ್ಥರಿಗೆ ನೀಡಿದ್ದ ಭರವಸೆಯಂತೆ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಹಿರಿಯರು, ಗ್ರಾಮಸ್ಥರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ಬಾಕನೂರು-ಗೋಲ್ಯಾಳಿ ಗ್ರಾಮಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿದರು. ಸುಮಾರು ₹1 ಕೋಟಿ ಅನುದಾನದಲ್ಲಿ ರಸ್ತೆ ನಿರ್ಮಾಣವಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ಎಸ್.ಎಲ್. ಚೌಗುಲೆ, ನಾರಾಯಣ ಗೋಡ್ಸೆ, ಸುರೇಶ್ ನಾಯಿಕ್, ಪರಸು ಮಜುಕರ್, ರಾಮನಿಂಗ್ ಸಾವಂತ, ಪಿರಾಜಿ ಮೆನಸೆ, ವಿಠ್ಠಲ ಮಜುಕರ್, ಪಾಂಡುರಂಗ ನಾಯಿಕ್, ಬಾರ್ಕು ನಾಯಿಕ್, ನಿಂಗು ಪುಲಮ್, ಅಶೋಕ್ ಮಜುಕರ್ ಹಾಗೂ ಗ್ರಾಮದ ಪಂಚ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಬಿಜಗರಣಿ-ಜಾನೇವಾಡಿ ಹಾಗೂ ಜಾನೇವಾಡಿ-ಕರ್ಲೆ ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗಳಿಗೂ ಆಯಾ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಈ ಎರಡು ರಸ್ತೆ ಕಾಮಗಾರಿಗಳಿಗೆ ಒಟ್ಟು ಸುಮಾರು ₹4 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಪೂರ್ಣಗೊಳಿಸುವಿಕೆಯಿಂದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಸುಧಾರಿಸಲಿದೆ.

ಈ ಸಂದರ್ಭದಲ್ಲಿ ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ರಾಮಚಂದ್ರ ಗುರವ್, ಬಾಳು ಹೊಸೂರಕರ್, ಭರಮಾ ಕೆಬುಡೆ, ಮಲ್ಲಪ್ಪ ಮಾಸಿಕರ್, ಪರಶುರಾಮ ಗುರವ್, ನಾರಾಯಣ ಹೊನಗೇಕರ್, ಕಾಳು ಪಾವಸೆ, ಭರಮಾ ಪಾವಸೆ, ರಾಮಚಂದ್ರ ಚಾಜೆಕರ್ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಆಶೀರ್ವಾದದಿಂದ ಇಂದು ರಾಜ್ಯದ ಮೂಲೆಮೂಲೆಗಳಲ್ಲಿ ಪರಿಚಿತಳಾಗಿದ್ದೇನೆ. ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಋಣ ತೀರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಷ, ಜಾತಿ, ಧರ್ಮವನ್ನು ನೋಡದೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ನನ್ನ ಅಭಿವೃದ್ಧಿಯ ವೇಗಕ್ಕೆ ತಡೆಯಾಗದಂತೆ ಮುಂದಿನ ದಿನಗಳಲ್ಲಿಯೂ ನಿಮ್ಮ ಆಶೀರ್ವಾದ ಬೇಕು. ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ, ಈಗ ನಿಮ್ಮ ಬೆಂಬಲ ಕೇಳುತ್ತಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ಬಂದು ಭಾಷಣ ಮಾಡುವವರನ್ನು ನಂಬಬೇಡಿ. ವರ್ಷದ 365 ದಿನವೂ ನಿಮ್ಮೊಂದಿಗೆ ನಿಲ್ಲುವ ನನ್ನ ಜೊತೆ ನೀವೂ ನಿಲ್ಲಬೇಕು. ಕ್ಷೇತ್ರದ ಜನರೆಲ್ಲ ಒಂದಾಗಿ ನಿಂತು ಅಭಿವೃದ್ಧಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande