
ಶಿವಮೊಗ್ಗ, 25 ಅಕ್ಟೋಬರ್ (ಹಿ.ಸ.):
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ‘ವಿಬಿ-ಜಿ ರಾಮ್ ಜಿ’ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಈಶ್ವರ ಖಂಡ್ರೆ ಸಭೆಯ ಅಧ್ಯಕ್ಷತೆ ವಹಿಸಿ, ಯೋಜನೆಯ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮೀಣ ಜನರಿಗೆ ಯೋಜನೆಯ ಹೆಚ್ಚಿನ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.