
ಚಾಮರಾಜನಗರ, 25 ಅಕ್ಟೋಬರ್ (ಹಿ.ಸ.):
ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪನಂಬಿಕೆ ಬೇಡ. ಪರಿಶುದ್ಧ ಮನಸ್ಸಿನಿಂದ ಪ್ರಾರ್ಥಿಸುವುದು ಮತ್ತು ನಂಬಿಕೆಯಿಂದ ಮುನ್ನಡೆಯುವುದು ಮುಖ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದರು. ಅವರು ಉತ್ತಮ ಆಡಳಿತವನ್ನೂ ನೀಡಿದ್ದಾರೆ. ಹೀಗಿರುವಾಗ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತಿನಲ್ಲಿ ಅರ್ಥವಿಲ್ಲ ಎಂದು ತಿಳಿಸಿದರು.
ನಾವು ಯಾವುದೇ ತಪ್ಪು ಮಾಡದೆ ದೇವರಲ್ಲಿ ಒಳ್ಳೆಯದನ್ನೇ ಪ್ರಾರ್ಥಿಸುತ್ತೇವೆ. ಚಾಮರಾಜನಗರಕ್ಕೆ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸಲು ಬಂದಿದ್ದೇವೆ. ಬುದ್ಧನ ಆಚಾರ-ವಿಚಾರಗಳನ್ನು ಸ್ಮರಿಸಿ, ಅವರ ಸಂದೇಶವನ್ನು ಅರಿತುಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಬುದ್ಧರು ಜಗತ್ತಿಗೆ ಮಾನವೀಯತೆ, ತ್ಯಾಗ, ಶಾಂತಿ ಮತ್ತು ಅಭಿವೃದ್ಧಿಯ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಈ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲವನ್ನೂ ಅನುಮಾನದ ದೃಷ್ಟಿಯಿಂದ ನೋಡುವ ಮನೋಭಾವವನ್ನು ಬಿಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.