
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)
ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಎಸ್ಐಆರ್ ವಿರುದ್ಧ ನವೆಂಬರ್ 1 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಬಳ್ಳಾರಿ ಜಿಲ್ಲೆಯಿಂದ 60 ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಎ.ಆರ್.ಎಂ. ಹುಸೇನ್ ಅವರು ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜೊತೆಯಲ್ಲಿ ಸೋಮವಾರ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಬ್ಲಾಕ್ಗಳ ಪದಾಧಿಕಾರಿಗಳ ನೇಮಕಾತಿಗಾಗಿ ಅರ್ಜಿಗಳನ್ನು ನೀಡಲಾಗಿದೆ. ಸೋಮವಾರ ಮತ್ತು ಮಂಗಳವಾರ ಜಿಲ್ಲೆಯಲ್ಲಿ ಬ್ಲಾಕ್ವಾರು ಸಭೆಗಳನ್ನು ನಡೆಸಿ, ಅರ್ಹರು ಮತ್ತು ಆಸಕ್ತಿ ಇರುವವರನ್ನು ಆರಿಸಿ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಕೆಪಿಸಿಸಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.
ಕೆಪಿಸಿಸಿ ವೀಕ್ಷಕರಾದ ಶೈಲಜಾ ಹಿರೇಮಠ, ರಾಜಶೇಖರ್, ಜಿಲ್ಲಾ ನಗರ ಅಧ್ಯಕ್ಷ ಅಲ್ಲಂ ಪ್ರಶಾಂತ್, ಮೇಯರ್ ಪಿ. ಗಾದೆಪ್ಪ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್