
ಬೆಂಗಳೂರು, 26 ಅಕ್ಟೋಬರ್ (ಹಿ.ಸ.):
ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣಗಳನ್ನು ದರೋಡೆ ಮಾಡಿರುವ ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ.
ವೆಂಕಟಲಕ್ಷ್ಮಮ್ಮ (70) ಕೊಲೆಯಾದ ವೃದ್ಧೆ. ಇವರು ತಮ್ಮ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಶನಿವಾರ ಸಂಜೆ ದುಷ್ಕರ್ಮಿಗಳು ಮನೆಗೆ ನುಗ್ಗಿ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ವೆಂಕಟಲಕ್ಷ್ಮಮ್ಮ ಅವರ ತಲೆ ಹಾಗೂ ಕತ್ತಿನ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ದುಷ್ಕರ್ಮಿಗಳು ಮನೆಯ ಬೀರುಗಳನ್ನು ಒಡೆದು, ಅದರಲ್ಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವೃದ್ಧೆಯ ಕೊಲೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R