ಮಹರ್ಷಿ ವಾಲ್ಮೀಕಿ ಜಯಂತಿ: ಡಿ.ಕೆ. ಶಿವಕುಮಾರ್, ಪರಮೇಶ್ವರ, ಆರ್. ಅಶೋಕ್ ಸೇರಿ ಗಣ್ಯರ ಶುಭಾಶಯ
ಬೆಂಗಳೂರು, 26 ಅಕ್ಟೋಬರ್ (ಹಿ.ಸ.): ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಸಚಿವ ರಿಜ್ವಾನ್ ಅರ್ಷದ್ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಡಿ.ಕ
ಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 26 ಅಕ್ಟೋಬರ್ (ಹಿ.ಸ.):

ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಸಚಿವ ರಿಜ್ವಾನ್ ಅರ್ಷದ್ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಾಶಯ ತಿಳಿಸಿ, ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಸತ್ಯ, ಧರ್ಮ ಮತ್ತು ಆದರ್ಶ ಜೀವನದ ಮೌಲ್ಯಗಳನ್ನು ಸಾರಿದವರು ಆದಿಕವಿ ಮಹರ್ಷಿ ವಾಲ್ಮೀಕಿ ಎಂದು ಹೇಳಿದ್ದಾರೆ. ಸಾಮಾನ್ಯ ಬೇಡನಾಗಿದ್ದ ರತ್ನಾಕರ ತನ್ನ ಕಠಿಣ ತಪಸ್ಸು ಮತ್ತು ಛಲದಿಂದ ಮಹರ್ಷಿಯಾಗಿ ಬೆಳೆದ ಕಥೆ ಮನುಕುಲಕ್ಕೆ ಸದಾ ಸ್ಫೂರ್ತಿದಾಯಕವಾಗಿದೆ. ಅಜ್ಞಾನದ ಕತ್ತಲನ್ನು ಕಳೆದು ಸುಜ್ಞಾನದ ಬೆಳಕನ್ನು ತೋರಿದ ಮಹರ್ಷಿ ವಾಲ್ಮೀಕಿಯವರ ಜ್ಞಾನದ ಸಿಂಚನ ಎಲ್ಲರ ಬದುಕನ್ನು ಬೆಳಗಲಿ ಎಂದು ಆಶಿಸಿದ್ದಾರೆ.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ಆದಿಕವಿ ಮಹರ್ಷಿ ವಾಲ್ಮೀಕಿಯವರು ತಮ್ಮ ಮಹಾಕಾವ್ಯ ರಾಮಾಯಣದ ಮೂಲಕ ಜಗತ್ತಿಗೆ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಸಾರಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣವು ಮಾನವೀಯ ಮೌಲ್ಯಗಳು, ಧರ್ಮನಿಷ್ಠೆ, ಆದರ್ಶ ಜೀವನ ಹಾಗೂ ಕರ್ತವ್ಯ ಪ್ರಜ್ಞೆಯ ಅಮೂಲ್ಯ ಸಂದೇಶವನ್ನು ಜಗತ್ತಿಗೆ ಸಾರಿದೆ. ಅವರ ಉದಾತ್ತ ಚಿಂತನೆಗಳು ಮತ್ತು ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದ್ದಾರೆ.

ಸಚಿವ ರಿಜ್ವಾನ್ ಅರ್ಷದ್ ಅವರು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದು, ರಾಮಾಯಣದ ಮೂಲಕ ಜ್ಞಾನ, ಧರ್ಮ ಮತ್ತು ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಆದಿಕವಿ ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande