ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.) ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ 2026ನೇ ಸಾಲಿನ ಜಿಲ್ಲಾ ಮಟ್ಟದ ಶ್ರೀ ಮ
ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ 2026ನೇ ಸಾಲಿನ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಗರದ ವಾಲ್ಮೀಕಿ ವೃತ್ತ ಹಾಗೂ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ, ಜಯಂತಿಯ ಶುಭಾಶಯ ಕೋರಿದರು.

ಬಳಿಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು.

ಇದೇ ವೇಳೆ 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ತೋರಿದ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊದ್ದೀನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande