
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)
ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಇರುವ ಮಹರ್ಷಿ ಶ್ರೀ ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಜಿ. ಸೋಮಶೇಖರರೆಡ್ಡಿ ಅವರು, ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು, ಜ್ಞಾನ ಮತ್ತು ಅಮೂಲ್ಯ ಸಂದೇಶಗಳನ್ನು ಸ್ಮರಿಸಿ ಗೌರವ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಪೊರೇಟರುಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್