
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)
ಮಹರ್ಷಿ ಶ್ರೀ ವಾಲ್ಮೀಕಿ ಅವರ ಜೀವನದ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯದ ಪ್ರಭಾರಿ ಪ್ರಾಂಶುಪಾಲರಾದ ಎ. ರಮೇಶ್ ಅವರು ತಿಳಿಸಿದ್ದಾರೆ.
ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಮಹರ್ಷಿ ಶ್ರೀವಾಲ್ಮೀಕಿ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಹಾಗೂ ಮಾನವೀಯ ಮೌಲ್ಯಗಳು ಸಮಾಜಕ್ಕೆ ಸದಾ ಮಾರ್ಗದರ್ಶನ ನೀಡುತ್ತವೆ. ಮಹರ್ಷಿಗಳ ಜೀವನದ ಸಂದೇಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು.
ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್