


ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಸೋಮವಾರ ಆಚರಿಸಿ, ವಾಲ್ಮೀಕಿ ವೃತ್ತದಲ್ಲಿ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆವಹಿಸಿ, ಮಹರ್ಷಿಗಳು ರಾಮಾಯಣ ರಚಿಸಿ ಆದಿಕವಿಯಾಗಿದ್ದಾರೆ. ವಾಲ್ಮೀಕಿ ಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷರಾದ ಎ.ಆರ್.ಎಂ.ಹುಸೇನ್, ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ್ ಮತ್ತು ರಾಜಶೇಖರ್ ಅವರು, ಮಹರ್ಷಿ ಶ್ರೀ ವಾಲ್ಮೀಕಿ ಅವರು ರಾಮಾಯಣ ಬರೆದು ಅಜರಾಮರರಾದರು ಎಂದರು.
ಜಿಲ್ಲಾ ಕಾಂಗ್ರೆಸ್ ವಿವಿಧ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್