ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು ; ಬಳ್ಳಾರಿಯಲ್ಲಿ ಸಂಭ್ರಮಾಚರಣೆ
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.) ಈಶಾನ್ಯ ಶಿಕ್ಷಕರ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಐದನೇಬಾರಿ ಆಯ್ಕೆ ಆಗಿರುವ ಹಿನ್ನಲೆಯಲ್ಲಿ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ಗಡಿಗೆ ಚನ್ನಪ್ಪ ವೃತ್ತದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಬಿಜೆ
ನಮೋಶಿ ಗೆಲುವು ; ಬಳ್ಳಾರಿಯಲ್ಲಿ ಸಂಭ್ರಮಾಚರಣೆ


ನಮೋಶಿ ಗೆಲುವು ; ಬಳ್ಳಾರಿಯಲ್ಲಿ ಸಂಭ್ರಮಾಚರಣೆ


ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)

ಈಶಾನ್ಯ ಶಿಕ್ಷಕರ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ಐದನೇಬಾರಿ ಆಯ್ಕೆ ಆಗಿರುವ ಹಿನ್ನಲೆಯಲ್ಲಿ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ಗಡಿಗೆ ಚನ್ನಪ್ಪ ವೃತ್ತದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿ. ಸೋಮಶೇಖರರೆಡ್ಡಿ ಅವರು, ಕರ್ನಾಟಕದಲ್ಲಿ ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಭವಿಷ್ಯದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಗುವ ದಿಕ್ಸೂಚಿ ಈ ಫಲಿತಾಂಶವಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande