ತಮ್ಮ ಆರೋಗ್ಯ ಸ್ಥಿತಿ ಸ್ಥಿರ ಆತಂಕ ಬೇಡ:ಡಿಸಿಎಂ ಜಿ.ಪರಮೇಶ್ವರ
ಬೆಂಗಳೂರಿನಲ್ಲಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಅವರು, ಆಸ್ಪತ್ರೆಯ ಬಳಿ ಭೇಟಿ ನೀಡಲು ಬರದಂತೆ ಸಾರ್ವಜನಿಕರಲ್
g-parameshwara-health-stable-after-heartbeat-issue-bengaluru


ಬೆಂಗಳೂರು, 27 ಅಕ್ಟೋಬರ್ (ಹಿ.ಸ.):

ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ತುಸು ಹೆಚ್ಚಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಸ್ಪತ್ರೆಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆದಿದ್ದಾರೆ.

ಸದ್ಯ ಆರೋಗ್ಯ ಸ್ಥಿರವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಾ. ಜಿ. ಪರಮೇಶ್ವರ್, ಕಾರ್ಯಕ್ರಮದ ವೇಳೆ ಹೃದಯಬಡಿತ ಹೆಚ್ಚಾದ ಕಾರಣ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಹೇಳಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ಹಲವರು ದೂರವಾಣಿ ಕರೆಗಳ ಮೂಲಕ ಯೋಗಕ್ಷೇಮ ವಿಚಾರಿಸಿದ್ದು, ಎಲ್ಲರ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ದೇವರ ದಯೆಯಿಂದ ತಮ್ಮ ಆರೋಗ್ಯ ಈಗ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ತಮ್ಮನ್ನು ಭೇಟಿ ಮಾಡಲು ಸಾರ್ವಜನಿಕರು ಆಸ್ಪತ್ರೆಯ ಬಳಿ ಬರಬಾರದು ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande