ಪ್ರಜಾಸತ್ತಾತ್ಮಕ ಹಕ್ಕುಗಳು, ಜಾತ್ಯತೀತತೆ ರಕ್ಷಣೆಗಾಗಿ ಅ.31ರಂದು ಬೆಂಗಳೂರಿನಲ್ಲಿ ಸಮಾವೇಶ
ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) ಮಾನವ ಹಕ್ಕುಗಳು, ಪ್ರಜಾಪ್ರಭುತ್ವದ ಹಕ್ಕುಗಳು ಹಾಗೂ ಧರ್ಮನಿರಪೇಕ್ಷತೆಯ ರಕ್ಷಣೆಯ ಉದ್ದೇಶದಿಂದ `ಸೆಂಟರ್ ಫಾರ್ ಪೆಟೆಕ್ಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಅಂಡ್ ಸೆಕ್ಯುಲಾರಿಸಂ'' ಸಂಘಟನೆಯು ಅಕ್ಟೋಬರ್ 31ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಆಯೋಜಿಸಿದೆ.
ಪ್ರಜಾಸತ್ತಾತ್ಮಕ ಹಕ್ಕುಗಳು, ಜಾತ್ಯತೀತತೆ ರಕ್ಷಣೆಗಾಗಿ ಅ.31ರಂದು ಬೆಂಗಳೂರಿನಲ್ಲಿ ಸಮಾವೇಶ


ಪ್ರಜಾಸತ್ತಾತ್ಮಕ ಹಕ್ಕುಗಳು, ಜಾತ್ಯತೀತತೆ ರಕ್ಷಣೆಗಾಗಿ ಅ.31ರಂದು ಬೆಂಗಳೂರಿನಲ್ಲಿ ಸಮಾವೇಶ


ಬಳ್ಳಾರಿ, 28 ಅಕ್ಟೋಬರ್ (ಹಿ.ಸ.)

ಮಾನವ ಹಕ್ಕುಗಳು, ಪ್ರಜಾಪ್ರಭುತ್ವದ ಹಕ್ಕುಗಳು ಹಾಗೂ ಧರ್ಮನಿರಪೇಕ್ಷತೆಯ ರಕ್ಷಣೆಯ ಉದ್ದೇಶದಿಂದ `ಸೆಂಟರ್ ಫಾರ್ ಪೆಟೆಕ್ಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಅಂಡ್ ಸೆಕ್ಯುಲಾರಿಸಂ' ಸಂಘಟನೆಯು ಅಕ್ಟೋಬರ್ 31ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಆಯೋಜಿಸಿದೆ.

ಸೆಂಟರ್ ಫಾರ್ ಪೆಟೆಕ್ಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಅಂಡ್ ಸೆಕ್ಯುಲಾರಿಸಂ ಸಂಘಟನೆಯ ಆರ್. ಸೋಮಶೇಖರಗೌಡ ಅವರು ಸುದ್ದಿಗಾರರಿಗೆ ಬುಧವಾರ ಮಾಹಿತಿ ನೀಡಿದರು.

ದೇಶಾದ್ಯಂತ ಮಾನವ ಹಕ್ಕುಗಳು, ಪ್ರಜಾಪ್ರಭುತ್ವ ಹಾಗೂ ಧರ್ಮನಿರಪೇಕ್ಷತೆಯ ಮಹತ್ವದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಚರ್ಚೆಗಳು, ವಿಚಾರ ಸಂಕಿರಣಗಳು ಮತ್ತು ವೆಬಿನಾರ್ಗಳನ್ನು ಆಯೋಜಿಸುತ್ತಿದೆ. ಇಂದಿನ ಸಂದರ್ಭದಲ್ಲಿ ಜನರ ಆಶೋತ್ತರಗಳು ಮತ್ತು ಆಡಳಿತ ವ್ಯವಸ್ಥೆಯ ನಡುವಿನ ಅಂತರ ಹೆಚ್ಚಾಗುತ್ತಿದೆ.

ಅಕ್ಟೋಬರ್ 31ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ, ಪತ್ರಕರ್ತ ರವೀಂದ್ರ ಭಟ್ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಎಸ್.ಆರ್. ಹಿರೇಮಠ ಸೇರಿ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಮಾನವ ಹಕ್ಕುಗಳ ರಕ್ಷಣೆ, ಪ್ರಜಾಪ್ರಭುತ್ವದ ಆಶಯಗಳ ಉಳಿವು ಹಾಗೂ ಧರ್ಮನಿರಪೇಕ್ಷ ಮೌಲ್ಯಗಳ ಬಲವರ್ಧನೆಗೆ ಸಂಬಂಧಿಸಿದ ವಿಚಾರಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಖೀಜಾರ್, ದೂದ್ಪೀರ ಸೇರಿ ಅನೇಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande