ಹಿರೇಹಡ್ಲಿಗಿ : ವಿದ್ಯಾರ್ಥಿಗಳ ಕ್ರೀಡಾ ಸಾಧನೆ ರಾಜ್ಯ ಮಟ್ಟಕ್ಕೆ - ಇಬ್ಬರು ಆಯ್ಕೆ
ಹಿರೇಹಡ್ಲಿಗಿ, 28 ಅಕ್ಟೋಬರ್ (ಹಿ.ಸ.) ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಬಳ್ಳಾರಿ ತಾಲೂಕಿನ ಹಿರೇಹಡ್ಲಿಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕ ಜಯಿಸಿದ್ದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಬಾಲಕರ
ಹಿರೇಹಡ್ಲಿಗಿ : ವಿದ್ಯಾರ್ಥಿಗಳ ಕ್ರೀಡಾ ಸಾಧನೆ ರಾಜ್ಯ ಮಟ್ಟಕ್ಕೆ - ಇಬ್ಬರು ಆಯ್ಕೆ


ಹಿರೇಹಡ್ಲಿಗಿ : ವಿದ್ಯಾರ್ಥಿಗಳ ಕ್ರೀಡಾ ಸಾಧನೆ ರಾಜ್ಯ ಮಟ್ಟಕ್ಕೆ - ಇಬ್ಬರು ಆಯ್ಕೆ


ಹಿರೇಹಡ್ಲಿಗಿ, 28 ಅಕ್ಟೋಬರ್ (ಹಿ.ಸ.)

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಬಳ್ಳಾರಿ ತಾಲೂಕಿನ ಹಿರೇಹಡ್ಲಿಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕ ಜಯಿಸಿದ್ದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದ 3,000 ಮೀಟರ್ ಓಟದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ಎಸ್. ಚಿನ್ನ ಅವರು ದ್ವಿತೀಯ ಸ್ಥಾನ ಪಡೆದರೆ, 1,500 ಮೀಟರ್ ಓಟದ ಸ್ಪರ್ಧೆಯಲ್ಲಿ ಚನ್ನದಾಸರ ರಾಮಪ್ರಸಾದ್ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಈ ಮೂಲಕ ಇಬ್ಬರೂ ಕ್ರೀಡಾಪಟುಗಳು ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದು, ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಪ್ರತಿಭೆಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande