
ಗದಗ, 28 ಅಕ್ಟೋಬರ್ (ಹಿ.ಸ.):
ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ನಾಗಪ್ಪ ಮುದುಕಪ್ಪ ಬಜಂತ್ರಿ (60) ಹಾಗೂ ಬೈಕ್ನ ಹಿಂಬದಿ ಸವಾರ ಆದಿತ್ಯ ದ್ಯಾಮಣ್ಣ ಕೊಂಚಿಗೇರಿ (19) ಎಂದು ಗುರುತಿಸಲಾಗಿದೆ.
ಮೃತರು ಕಣವಿ ದುರ್ಗಮ್ಮ ದೇವಸ್ಥಾನದಿಂದ ತಮ್ಮ ಊರಾದ ಬಾಲೇಹೊಸೂರು ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬನ್ನಿಕೊಪ್ಪ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R