ಕಲಬುರಗಿಯಲ್ಲಿ ದೇವಸ್ಥಾನ, ದರ್ಗಾಕ್ಕೆ ಭೇಟಿ; ಮಧ್ಯರಾತ್ರಿ ಆರೋಗ್ಯ ಕೇಂದ್ರ ಪರಿಶೀಲಿಸಿದ ಯು.ಟಿ. ಖಾದರ್
ಕಲಬುರಗಿಯ ಶ್ರೀ ಶರಣಬಸವೇಶ್ವರ ದೇವಸ್ಥಾನ ಹಾಗೂ ಖ್ವಾಜಾ ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿದ ಯು.ಟಿ. ಖಾದರ್, ತಡರಾತ್ರಿ 1 ಗಂಟೆಗೆ ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿ, ರೋಗಿಗಳ ಸಮಸ್ಯೆಗಳನ್ನು ಆಲಿಸಿದರು.
UT-Khader-Surprise-Visit-Shahabad-Community-Health-Centre-Kalaburagi


ಕಲಬುರಗಿ, 28 ಅಕ್ಟೋಬರ್ (ಹಿ.ಸ.):

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಕಲಬುರಗಿಯ ಪ್ರಸಿದ್ಧ ಶ್ರೀ ಶರಣಬಸವೇಶ್ವರ ದೇವಸ್ಥಾನ ಹಾಗೂ ಹಜರತ್ ಖ್ವಾಜಾ ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ಯು.ಟಿ. ಖಾದರ್ ಅವರು ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದರು. ಬಳಿಕ ಹಜರತ್ ಖ್ವಾಜಾ ಬಂದಾ ನವಾಜ್ ದರ್ಗಾಕ್ಕೆ ತೆರಳಿ ಆಶೀರ್ವಾದ ಪಡೆದರು.

ಮಧ್ಯರಾತ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ

ಇದೇ ವೇಳೆ, ಶಹಾಬಾದ್ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಯು.ಟಿ. ಖಾದರ್ ಅವರು ತಡರಾತ್ರಿ 1 ಗಂಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಮುನ್ಸೂಚನೆ ನೀಡದೆ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿ, ಆಸ್ಪತ್ರೆಯ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳೊಂದಿಗೆ ಮಾತನಾಡಿ, ಅವರಿಗೆ ದೊರೆಯುತ್ತಿರುವ ವೈದ್ಯಕೀಯ ಸೇವೆಗಳು ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೆ, ಆರೋಗ್ಯ ಕೇಂದ್ರದ ಸಿಬ್ಬಂದಿಯೊಂದಿಗೆ ಚರ್ಚಿಸಿ, ಆಸ್ಪತ್ರೆಯ ವ್ಯವಸ್ಥೆ ಮತ್ತು ಸೇವೆಗಳ ಬಗ್ಗೆ ಪರಿಶೀಲನೆ ನಡೆಸಿದರು.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande