ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು
ನವದೆಹಲಿ, 29 ಅಕ್ಟೋಬರ್ (ಹಿ.ಸ.): ಭಾರತೀಯ ಜನತಾ ಯುವ ಮೋರ್ಚಾದ ನೂತನ ತಂಡದ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯ ವಿಸ್ತರಣಾ ಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು, ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಾಂಗ್ ಜೋಶಿ ಹಾ
भाजपा के युवा मोर्चा के अध्यक्ष हेमांग जोशी (फाइल फोटो)


ನವದೆಹಲಿ, 29 ಅಕ್ಟೋಬರ್ (ಹಿ.ಸ.):

ಭಾರತೀಯ ಜನತಾ ಯುವ ಮೋರ್ಚಾದ ನೂತನ ತಂಡದ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯ ವಿಸ್ತರಣಾ ಭವನದಲ್ಲಿ ನಡೆಯಲಿದೆ.

ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು, ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಾಂಗ್ ಜೋಶಿ ಹಾಗೂ ಸಂಘಟನೆಯ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭಾಷಣದೊಂದಿಗೆ ಸಭೆ ಮುಕ್ತಾಯಗೊಳ್ಳಲಿದೆ.

ನೂತನ ತಂಡ ರಚನೆಯಾದ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ರಾಷ್ಟ್ರೀಯ ಸಭೆಯಲ್ಲಿ ಸಂಘಟನಾತ್ಮಕ ಚಟುವಟಿಕೆಗಳು, ಮುಂಬರುವ ಯುವಜನರ ಕಾರ್ಯಕ್ರಮಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಯುವ ಮೋರ್ಚಾದ ಭವಿಷ್ಯದ ಕಾರ್ಯಯೋಜನೆ ರೂಪಿಸುವುದರ ಜತೆಗೆ ಯುವಜನರಲ್ಲಿ ಸಂಘಟನೆಯ ವ್ಯಾಪ್ತಿ ಮತ್ತು ಸಕ್ರಿಯತೆಯನ್ನು ಹೆಚ್ಚಿಸುವ ಬಗ್ಗೆಯೂ ಸಭೆಯಲ್ಲಿ ಒತ್ತು ನೀಡುವ ಸಾಧ್ಯತೆಯಿದೆ. ಸಂಘಟನೆಯ ವಿಸ್ತರಣೆ ಹಾಗೂ ಮುಂಬರುವ ಕಾರ್ಯಕ್ರಮಗಳಿಗೆ ದಿಕ್ಕು ನಿರ್ಧರಿಸುವ ದೃಷ್ಟಿಯಿಂದ ಈ ಸಭೆ ಮಹತ್ವ ಪಡೆದಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande