ಚಿನ್ನದ ಬೆಲೆಯಲ್ಲಿ ಏರಿಕೆ: ಬೆಳ್ಳಿ ದರದಲ್ಲಿ ಬದಲಾವಣೆ ಇಲ್ಲ
ನವದೆಹಲಿ, 29 ಅಕ್ಟೋಬರ್ (ಹಿ.ಸ.): ಕರವಾ ಚೌತ್‌ ಹಬ್ಬದ ದಿನವಾದ ಇಂದು ದೇಶದ ಚಿನ್ನಾಭರಣ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ವಿವಿಧ ಮಾರುಕಟ್ಟೆಗಳಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 600ರಿಂದ 660 ರೂ.ವರೆಗೆ ಹೆಚ್ಚಳವಾಗಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯಲ್ಲಿ ಸತತ ಮೂರನ
प्रतीकात्मक


ನವದೆಹಲಿ, 29 ಅಕ್ಟೋಬರ್ (ಹಿ.ಸ.):

ಕರವಾ ಚೌತ್‌ ಹಬ್ಬದ ದಿನವಾದ ಇಂದು ದೇಶದ ಚಿನ್ನಾಭರಣ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ವಿವಿಧ ಮಾರುಕಟ್ಟೆಗಳಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 600ರಿಂದ 660 ರೂ.ವರೆಗೆ ಹೆಚ್ಚಳವಾಗಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯಲ್ಲಿ ಸತತ ಮೂರನೇ ದಿನವೂ ಯಾವುದೇ ಬದಲಾವಣೆಯಾಗಿಲ್ಲ.

ಚಿನ್ನದ ಬೆಲೆ ಏರಿಕೆಯಿಂದಾಗಿ ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,43,960ರಿಂದ 1,44,110 ರೂ.ವರೆಗೆ ವಹಿವಾಟು ನಡೆಸುತ್ತಿದೆ. ಅದೇ ರೀತಿ, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,31,960ರಿಂದ 1,32,110 ರೂ.ವರೆಗೆ ಇದೆ. ದೆಹಲಿಯ ಮಾರುಕಟ್ಟೆಯಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆ.ಜಿಗೆ 2,19,900 ರೂ.ನಲ್ಲೇ ಮುಂದುವರಿದಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,44,110 ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 1,32,110 ರೂ. ಇದೆ. ಮುಂಬೈನಲ್ಲಿ ಕ್ರಮವಾಗಿ 1,43,960 ರೂ. ಮತ್ತು 1,31,960 ರೂ. ದರದಲ್ಲಿ ಚಿನ್ನ ಮಾರಾಟವಾಗುತ್ತಿದೆ.

ಅಹಮದಾಬಾದ್‌ನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,44,010 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,32,010 ರೂ. ಇದೆ. ಚೆನ್ನೈ ಮತ್ತು ಕೋಲ್ಕತಾದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,43,960 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,31,960 ರೂ. ದಾಖಲಾಗಿದೆ.

ಭೋಪಾಲ್ ಮತ್ತು ಪಾಟ್ನಾದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,44,010 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,32,010 ರೂ. ಇದೆ. ಜೈಪುರ ಮತ್ತು ಲಖನೌನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,44,110 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,32,110 ರೂ. ಇದೆ.

ಬೆಂಗಳೂರು, ಹೈದರಾಬಾದ್‌ನಲ್ಲೂ ಏರಿಕೆ

ಕರ್ನಾಟಕ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ. ಈ ರಾಜ್ಯಗಳ ರಾಜಧಾನಿಗಳಾದ ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,43,960 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,31,960 ರೂ. ಇದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande