ಚಂಡಮಾರುತ ಅರ್ನಬ್: ಸಂತ್ರಸ್ತರಿಗೆ ಎಲ್ಲ ನೆರವು ನೀಡುವ ಭರವಸೆ ನೀಡಿದ ಅಮಿತ್ ಶಾ
ನವದೆಹಲಿ, 29 ಅಕ್ಟೋಬರ್ (ಹಿ.ಸ.): ಚಂಡಮಾರುತ ಅರ್ನಬ್ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಪುದುಚೇರಿ, ಒಡಿಶಾ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ವಿಪತ್ತಿನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ಒದಗಿಸಲಿದೆ ಎಂದು ಭರವಸೆ ನೀಡ
ಅಮಿತ್ ಶಾ ಫೈಲ್ ಪೋಟೋ


ನವದೆಹಲಿ, 29 ಅಕ್ಟೋಬರ್ (ಹಿ.ಸ.):

ಚಂಡಮಾರುತ ಅರ್ನಬ್ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಪುದುಚೇರಿ, ಒಡಿಶಾ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ವಿಪತ್ತಿನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ಒದಗಿಸಲಿದೆ ಎಂದು ಭರವಸೆ ನೀಡಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳು ಕಾರ್ಯಪ್ರವೃತ್ತವಾಗಿದ್ದು, ಸಮರೋಪಾದಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರಿಸಿವೆ ಎಂದು ಹೇಳಿದ್ದಾರೆ.

ವಿಪತ್ತಿನಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲು ಮತ್ತು ಅಗತ್ಯವಿರುವ ಹೆಚ್ಚುವರಿ ನೆರವಿನ ಕುರಿತು ಅಂದಾಜು ಮಾಡಲು ಕೇಂದ್ರದ ಅಂತರ ಸಚಿವಾಲಯ ತಂಡಗಳನ್ನು ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಪತ್ತಿನ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಜನರೊಂದಿಗೆ ದೃಢವಾಗಿ ನಿಂತಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande