2027ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿ ಪ್ರಕಟ
ಫೆಬ್ರವರಿ 27ರಿಂದ ಮಾರ್ಚ್ 18ರವರೆಗೆ ಪರೀಕ್ಷೆ; ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆ
English Slug: Karnataka 2nd PUC Exam 1 Time Table 2027 Released, Exams From February 27


ಬೆಂಗಳೂರು, 29 ಅಕ್ಟೋಬರ್ (ಹಿ.ಸ.):

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2027ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮಂಡಳಿಯು ಅಕ್ಟೋಬರ್ 29ರಂದು ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 27ರಿಂದ ಆರಂಭವಾಗಿ ಮಾರ್ಚ್ 18ರವರೆಗೆ ನಡೆಯಲಿವೆ.

ಪರೀಕ್ಷೆಗಳು ಸಾಮಾನ್ಯವಾಗಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಕೆಲವು ವಿಷಯಗಳ ಪರೀಕ್ಷೆಗೆ ಮೂರು ಗಂಟೆಗಳ ಕಾಲಾವಕಾಶ ನಿಗದಿಪಡಿಸಲಾಗಿದೆ.

ಮಾರ್ಚ್ 10ರಂದು ಹೋಳಿ ಹಬ್ಬದ ಪ್ರಯುಕ್ತ ರಜೆ ಘೋಷಿಸಲಾಗಿದ್ದು, ಫೆಬ್ರವರಿ 28 ಮತ್ತು ಮಾರ್ಚ್ 7 ಹಾಗೂ 14ರಂದು ಭಾನುವಾರದ ರಜೆ ಇರಲಿದೆ. ಮಾರ್ಚ್ 6ರಂದು ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.

ವೇಳಾಪಟ್ಟಿಯ ಪ್ರಕಾರ, ಫೆಬ್ರವರಿ 27ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 1ರಂದು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಮಾರ್ಚ್ 2ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಭಾಷೆಗಳ ಪರೀಕ್ಷೆ ನಿಗದಿಯಾಗಿದೆ.

ಮಾರ್ಚ್ 3ರಂದು ಭೂಗೋಳಶಾಸ್ತ್ರ ಮತ್ತು ಮನಃಶಾಸ್ತ್ರ, ಮಾರ್ಚ್ 4ರಂದು ಸಮಾಜಶಾಸ್ತ್ರ ಮತ್ತು ಭೌತಶಾಸ್ತ್ರ, ಮಾರ್ಚ್ 5ರಂದು ಲೆಕ್ಕಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 8ರಂದು ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ ಮತ್ತು ಮೂಲ ಗಣಿತ, ಮಾರ್ಚ್ 9ರಂದು ಅರ್ಥಶಾಸ್ತ್ರ ಹಾಗೂ ಭೂಗರ್ಭಶಾಸ್ತ್ರ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಯಲ್ಲಿ ಸೂಚಿಸಲಾಗಿದೆ.

ಮಾರ್ಚ್ 11ರಂದು ಹಿಂದೂಸ್ತಾನಿ ಸಂಗೀತ, ವಿದ್ಯುನ್ಮಾನಶಾಸ್ತ್ರ ಮತ್ತು ಯಂತ್ರಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 12ರಂದು ವ್ಯವಹಾರ ಅಧ್ಯಯನ ಮತ್ತು ಗಣಿತ, ಮಾರ್ಚ್ 13ರಂದು ಇತಿಹಾಸ, ತರ್ಕಶಾಸ್ತ್ರ ಹಾಗೂ ಗೃಹವಿಜ್ಞಾನ ಪರೀಕ್ಷೆಗಳು ನಿಗದಿಯಾಗಿವೆ.

ಮಾರ್ಚ್ 15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳು, ಮಾರ್ಚ್ 16ರಂದು ಸಂಖ್ಯಾಶಾಸ್ತ್ರ ಮತ್ತು ವ್ಯವಹಾರ ಅಧ್ಯಯನಕ್ಕೆ ಸಂಬಂಧಿಸಿದ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 17ರಂದು ಹಿಂದಿ ಹಾಗೂ ಮಾರ್ಚ್ 18ರಂದು ಇತಿಹಾಸ ಪರೀಕ್ಷೆ ನಿಗದಿಯಾಗಿದೆ.

ವೇಳಾಪಟ್ಟಿಯಲ್ಲಿ ವಿಷಯವಾರು ಪರೀಕ್ಷಾ ಸಂಖ್ಯೆಗಳು, ಪರೀಕ್ಷೆಯ ಸಮಯ ಮತ್ತು ಗರಿಷ್ಠ ಅಂಕಗಳ ವಿವರಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೇಳಾಪಟ್ಟಿಯನ್ನು ಪರಿಶೀಲಿಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande