
ಬಾಗಲಕೋಟೆ, 29 ಅಕ್ಟೋಬರ್ (ಹಿ.ಸ.)
ಕನ್ನಡ ಚಿತ್ರರಂಗದ ಪವರ್ಸ್ಟಾರ್, ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ 5ನೇ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ಅಭಿಮಾನಿಯೊಬ್ಬರು ಕುಟುಂಬ ಸಮೇತರಾಗಿ ಭಾವಪೂರ್ಣವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.
ನವನಗರದ ನಿವಾಸಿ ಹಾಗೂ ಅಪ್ಪು ಅವರ ಅಭಿಮಾನಿ ನಾರಾಯಣ ಢಗೆ ಅವರು ತಮ್ಮ ಕುಟುಂಬಸ್ಥರೊಂದಿಗೆ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಅಪ್ಪು ಅವರಿಗೆ ಇಷ್ಟವಾಗಿದ್ದ ಖಾದ್ಯಗಳನ್ನು ತಯಾರಿಸಿ, ಅವುಗಳನ್ನು ನೈವೇದ್ಯವಾಗಿ ಅರ್ಪಿಸಿ ಗೌರವ ಸಲ್ಲಿಸಿದರು.
ಪುನೀತ್ ರಾಜ್ಕುಮಾರ್ ಅವರು ತಮ್ಮ ಅಭಿನಯ, ಸರಳ ವ್ಯಕ್ತಿತ್ವ, ಸಮಾಜಮುಖಿ ಚಿಂತನೆ ಹಾಗೂ ಮಾನವೀಯ ಗುಣಗಳಿಂದ ಕೋಟ್ಯಂತರ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ನಿಧನದ ನಂತರವೂ ಅಭಿಮಾನಿಗಳ ಪ್ರೀತಿ ಮತ್ತು ಗೌರವದಲ್ಲಿ ಯಾವುದೇ ಕೊರತೆಯಾಗಿಲ್ಲ.
ಪ್ರತಿ ವರ್ಷ ಅವರ ಪುಣ್ಯಸ್ಮರಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸೇವಾ ಕಾರ್ಯಗಳು, ಅನ್ನದಾನ, ರಕ್ತದಾನ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಪ್ಪು ಅವರನ್ನು ಸ್ಮರಿಸುತ್ತಿದ್ದಾರೆ.
ಅದೇ ರೀತಿಯಲ್ಲಿ ನಾರಾಯಣ ಢಗೆ ಹಾಗೂ ಕುಟುಂಬಸ್ಥರು ತಮ್ಮ ಮನೆಯಲ್ಲಿ ಸರಳವಾಗಿ ಪುಣ್ಯಸ್ಮರಣೆ ಆಚರಿಸುವ ಮೂಲಕ ಅಪ್ಪು ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು. ಪುನೀತ್ ರಾಜ್ಕುಮಾರ್ ಅವರ ಆದರ್ಶಗಳು ಹಾಗೂ ಸಮಾಜಕ್ಕೆ ನೀಡಿದ ಸಂದೇಶಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಕುಟುಂಬಸ್ಥರು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande