ಹಾಲಿನ ದರ ಏರಿಕೆಯಿಂದ ರೈತರಿಗೆ ಲಾಭ : ಸಚಿವ ಚಲುವರಾಯಸ್ವಾಮಿ
ಹಾಲಿನ ದರ ಏರಿಕೆ ರೈತರ ಪರವಾದ ಐತಿಹಾಸಿಕ ನಿರ್ಧಾರವಾಗಿದ್ದು, ಸಿದ್ದರಾಮಯ್ಯ ವಿರುದ್ಧದ ನಕಲಿ ವಿಡಿಯೋ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
milk-price-hike-cheluvarayaswamy


ಬೆಂಗಳೂರು, 29 ಅಕ್ಟೋಬರ್ (ಹಿ.ಸ.):

ಹಾಲಿನ ದರ ಏರಿಕೆ ಮಾಡುವ ಮೂಲಕ ನಮ್ಮ ಸರಕಾರ ರೈತರ ಕೈ ಬಲಪಡಿಸುವ ಕೆಲಸ ಮಾಡುತ್ತಿದೆ. 8ರೂ., ಏರಿಕೆ ಮಾಡಿ, ರೈತರಿಗೆ 6ರೂ., ಲಾಭ ನೀಡುವ ಐತಿಹಾಸಿಕ ನಿರ್ಧಾರವನ್ನು ನಮ್ಮ ಸರಕಾರ ಪ್ರಕಟಿಸಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ನಮ್ಮ ತಂದೆ ರೈತರೇ. ಅವರಿಗೆ 6 ರೂ., ದೊರೆಯುವುದಾದರೆ, ಎಲ್ಲರಗೂ ಹೆಚ್ಚುವರಿ ಹಾಲಿನ ದರ ದೊರೆಯಲಿ ಎಂದು ಏರಿಕೆಯನ್ನು ಸಮರ್ಥಿಸಿಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande