
ಬಳ್ಳಾರಿ, 03 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಹಾಗೂ ಕಲಬುರ್ಗಿ ವಲಯದ ಶೇ.40ರಷ್ಟು ಗುತ್ತಿಗೆ ನೌಕರರನ್ನು ಕಡಿತ ಮಾಡುವ ಕಂಪನಿಗಳ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡಲು ಆಗ್ರಹಿಸಿ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.
ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಎನ್. ಪ್ರಮೋದ್ ಅವರು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಶನಿವಾರ ಮನವಿ ಸಲ್ಲಿಸುವ ಮೂಲಕ, ಗುತ್ತಿಗೆ ನೌಕರರನ್ನು ಕೈಬಿಡುವ ಪ್ರಸ್ತಾವನೆಯನ್ನು ತಕ್ಷಣವೇ ತಡೆಯಬೇಕು. ಇಲ್ಲವಾದಲ್ಲಿ ಎಲ್ಲಾ ಗುತ್ತಿಗೆ ನೌಕರರು ಸೇರಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ನೌಕರರನ್ನು ಸೇವೆಯಲ್ಲಿ ಮುಂದುವರಿಸಬೇಕು. ಹತ್ತು ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರ ಉದ್ಯೋಗ ಭದ್ರತೆಯನ್ನು ಖಾತರಿಪಡಿಸಬೇಕು. ಎಲ್ಲಾ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್