ಕೇಂದ್ರ ಅಂತರ್ ಸಚಿವಾಲಯ ತಂಡದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಾಲೋಚನೆ
ಬೆಂಗಳೂರು, 03 ಅಕ್ಟೋಬರ್ (ಹಿ.ಸ.) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ
ಕೇಂದ್ರ ತಂಡದೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ


ಬೆಂಗಳೂರು, 03 ಅಕ್ಟೋಬರ್ (ಹಿ.ಸ.)

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande