ನಾಳೆ ಕವಿ ಹುಯಿಲಗೋಳ ನಾರಾಯಣರಾಯರ ಜನ್ಮದಿನಾಚರಣೆ ಅಂಗವಾಗಿ ಗಾಯನ ಕಾರ್ಯಕ್ರಮ
ಬಳ್ಳಾರಿ, 03 ಅಕ್ಟೋಬರ್ (ಹಿ.ಸ.) ಬಳ್ಳಾರಿಯ ಅಭಿನಯ ಕಲಾ ಕೇಂದ್ರವು ಅಕ್ಟೋಬರ್ 4ರ ಭಾನುವಾರ ಬೆಳಗ್ಗೆ 10 ಗಂಟೆಗೆ `ಪಂಚಮವೇದ ಪ್ರೇಮದ ನಾದ'' ಎಂಬ ಕನ್ನಡ ಕರೋಕೆ ಗಾಯನ ಕಾರ್ಯಕ್ರಮವನ್ನು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದೆ. ಈ ಕುರಿತು ಅಭಿನಯ ಕಲಾ ಕೇಂದ್ರದ ಅಧ್ಯಕ್ಷ
ಅಕ್ಟೋಬರ್ 4ರ ಭಾನುವಾರ `ಪಂಚಮವೇದ ಪ್ರೇಮದ ನಾದ'


ಬಳ್ಳಾರಿ, 03 ಅಕ್ಟೋಬರ್ (ಹಿ.ಸ.)

ಬಳ್ಳಾರಿಯ ಅಭಿನಯ ಕಲಾ ಕೇಂದ್ರವು ಅಕ್ಟೋಬರ್ 4ರ ಭಾನುವಾರ ಬೆಳಗ್ಗೆ 10 ಗಂಟೆಗೆ `ಪಂಚಮವೇದ ಪ್ರೇಮದ ನಾದ' ಎಂಬ ಕನ್ನಡ ಕರೋಕೆ ಗಾಯನ ಕಾರ್ಯಕ್ರಮವನ್ನು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಿದೆ.

ಈ ಕುರಿತು ಅಭಿನಯ ಕಲಾ ಕೇಂದ್ರದ ಅಧ್ಯಕ್ಷರಾದ ಕೆ. ಜಗದೀಶ್ ಅವರು ಮಾಹಿತಿ ನೀಡಿದ್ದು, `ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು' ಗೀತೆಯ ಕವಿ ಹುಯಿಲಗೋಳ ನಾರಾಯಣರಾಯರ ಜನ್ಮದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಯ 20 ಗಾಯಕರು 'ಸಾವಿರದ ಶರಣು' ಸಮೂಹ ಗಾಯನದೊಂದಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕನ್ನಡ ಭಾವಗೀತೆ ಭಕ್ತಿಗೀತೆ ಜಾನಪದ ಗೀತೆ ಹಾಗೂ ಸಿನಿಮಾ ಹಾಡುಗಳನ್ನು ಹಾಡಿ ಅವರು ರಂಜಿಸಲಿದ್ದಾರೆ.

ಚಿನ್ಮಯಿ ಹಾಗೂ ಶ್ರೀಮಯಿ ಸಹೋದರಿಯರು ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಇದು ಅಭಿನಯ ಕಲಾ ಕೇಂದ್ರದ ಮೂರನೇ ಕರೋಕೆ ಸಂಚಿಕೆಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande