ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂಗೆ ₹293.62 ಕೋಟಿ ಲಾಭ: ಕೆ.ಜೆ. ಜಾರ್ಜ್
ಪ್ರಸಕ್ತ ಸಾಲಿನಲ್ಲಿ ಬೆಸ್ಕಾಂ ₹293.62 ಕೋಟಿ ಲಾಭ ಗಳಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ವಿದ್ಯುತ್ ವಿತರಣೆ ವ್ಯವಸ್ಥೆ ಸುಧಾರಣೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
bescom-records-rs-293-62-crore-profit-in-current-fiscal-says-kj-george


ಬೆಂಗಳೂರು, 03 ಅಕ್ಟೋಬರ್ (ಹಿ.ಸ.):

ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ₹293.62 ಕೋಟಿ ಲಾಭ ಗಳಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಬೆಸ್ಕಾಂನ ಆರ್ಥಿಕ ಸ್ಥಿತಿ ಹಾಗೂ ಕಾರ್ಯನಿರ್ವಹಣೆ ಕುರಿತು ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಸಂಸ್ಥೆ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿದೆ.

ವಿದ್ಯುತ್ ವಿತರಣೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಸುಧಾರಣೆ ಹಾಗೂ ಆರ್ಥಿಕ ನಿರ್ವಹಣೆಗೆ ಕೈಗೊಂಡ ಕ್ರಮಗಳ ಪರಿಣಾಮವಾಗಿ ಡಿಸ್ಕಾಂಗಳ ಆರ್ಥಿಕ ಕಾರ್ಯಕ್ಷಮತೆಯಲ್ಲೂ ಸುಧಾರಣೆ ಕಂಡುಬಂದಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರೈಕೆ ವ್ಯವಸ್ಥೆಯನ್ನು ಬಲಪಡಿಸುವುದು, ಮೂಲಸೌಕರ್ಯ ಸುಧಾರಿಸುವುದು ಹಾಗೂ ಗ್ರಾಹಕರಿಗೆ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸುವುದು ಇಲಾಖೆಯ ಪ್ರಮುಖ ಆದ್ಯತೆಯಾಗಿದೆ ಎಂದು ಜಾರ್ಜ್ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande