ಬಳ್ಳಾರಿ: ಸಿಡಾಕ್ ಸಂಸ್ಥೆ ವತಿಯಿಂದ ಪರಿಶಿಷ್ಟ ಪಂಗಡದವರಿಗೆ 10 ದಿನಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಛಿಸುವ ಪರಿಶಿಷ್ಟ ಪಂಗಡದ ಪುರುಷ ಹಾಗೂ ಮಹಿಳೆಯರಿಗಾಗಿ ಬಳ್ಳಾರಿಯಲ್
ಬಳ್ಳಾರಿ: ಸಿಡಾಕ್ ಸಂಸ್ಥೆ ವತಿಯಿಂದ ಪರಿಶಿಷ್ಟ ಪಂಗಡದವರಿಗೆ 10 ದಿನಗಳ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಛಿಸುವ ಪರಿಶಿಷ್ಟ ಪಂಗಡದ ಪುರುಷ ಹಾಗೂ ಮಹಿಳೆಯರಿಗಾಗಿ ಬಳ್ಳಾರಿಯಲ್ಲಿ 10 ದಿನಗಳ ಉಚಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಮುಂತಾದ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತದೆ.

*ಅರ್ಹತೆಗಳು:*

ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 45 ವರ್ಷ ಒಳಗಿರಬೇಕು. ಅಭ್ಯರ್ಥಿಗಳಿಗೆ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಸಕ್ತರು ಕಚೇರಿ ವೇಳೆಯಲ್ಲಿ ನಿಗದಿತ ವಿಳಾಸದಲ್ಲಿ ಅರ್ಜಿಗಳನ್ನು ಪಡೆಯಬಹುದು ಅಥವಾ ಮೊಬೈಲ್ ಸಂಖ್ಯೆ 9449226221 ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ ಅಥವಾ ದೂರವಾಣಿ ಸಂಖ್ಯೆ: 9449226221 / 9448812974 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ನ ಉಪ ನಿರ್ದೇಶಕ ಶಿವಾನಂದ ಎಲಿಗಾರ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande