ಜವಾಹರ್ ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶ ಪರೀಕ್ಷೆ ಪತ್ರ ಬಿಡುಗಡೆ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಬಿಡುಗಡೆಯಾಗಿವೆ. ಪ್ರವೇಶ ಪರೀಕ್ಷೆಯು ದಿನಾಂಕ 28 ನವೆಂಬರ್ 2
ಜವಾಹರ್ ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶ ಪರೀಕ್ಷೆ ಪತ್ರ ಬಿಡುಗಡೆ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಬಿಡುಗಡೆಯಾಗಿವೆ.

ಪ್ರವೇಶ ಪರೀಕ್ಷೆಯು ದಿನಾಂಕ 28 ನವೆಂಬರ್ 2026 ರಂದು ನಡೆಯಲಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪೋಷಕರು ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ವೆಬ್ ಸೈಟ್ ಲಿಂಕ್: https://cbseitms.rcil.gov.in/nvs/AdminCard/Admit2027Card. ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪ್ರವೇಶ ಪತ್ರದ ಮುದ್ರಿತ ಪ್ರತಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕೆಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande