ಬಳ್ಳಾರಿ: ಲಿಡ್ಕರ್ ನಿಗಮದ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. *ಯೋಜನೆಗಳು:* ಚ
ಬಳ್ಳಾರಿ: ಲಿಡ್ಕರ್ ನಿಗಮದ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಯೋಜನೆಗಳು:*

ಚರ್ಮ ಕುಶಲಕರ್ಮಿ ಕುಟುಂಬಗಳಿಗೆ ತರಬೇತಿ ನೀಡಲು ಅಧ್ಯಯನ ಪ್ರವಾಸ ಯೋಜನೆ. ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ‘ಡಿಪ್ಲೊಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ’ (ಅರ್ಹತೆ: ಕನಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆ).

ಸ್ವಯಂ ಉದ್ಯೋಗ ಯೋಜನೆಗಳು: ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ. ಬಾಬು ಜಗಜೀವನ್ ರಾಂ ಚರ್ಮಕಾರರ ವಸತಿ ಯೋಜನೆ.

ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in) ಮುಖಾಂತರ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ವಿವರ ಮತ್ತು ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08392-271741 ಅಥವಾ ಮೊಬೈಲ್ ಸಂಖ್ಯೆ 9844667691 ಅನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಲಿಡ್ಕರ್ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande