ಮಹಿಳಾ ಅಭಿವೃದ್ಧಿ ನಿಗಮ - ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್
ಮಹಿಳಾ ಅಭಿವೃದ್ಧಿ ನಿಗಮ - ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನವೆಂಬರ್ 30 ರ ಸಂಜೆ 5:30ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

*ಯೋಜನೆಗಳ ವಿವರ ಹಾಗೂ ಅರ್ಹತೆಗಳು:*

ಉದ್ಯೋಗಿನಿ ಯೋಜನೆ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳ ಮೂಲಕ ಸಾಲ ಹಾಗೂ ನಿಗಮದಿಂದ ಸಹಾಯಧನ ನೀಡಲಾಗುತ್ತದೆ (ವಯೋಮಿತಿ: 18 ರಿಂದ 55 ವರ್ಷ).

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ: ಕುಟುಂಬದ ವಾರ್ಷಿಕ ಆದಾಯ ಮಿತಿ 2 ಲಕ್ಷ. ಕನಿಷ್ಠ 1 ಲಕ್ಷದಿಂದ ಗರಿಷ್ಠ 3 ಲಕ್ಷದವರೆಗಿನ ಘಟಕ ವೆಚ್ಚಕ್ಕೆ ಶೇ. 75ರಷ್ಟು (ಗರಿಷ್ಠ 2 ಲಕ್ಷ) ಸಹಾಯಧನ ದೊರೆಯಲಿದೆ.

ಸಾಮಾನ್ಯ ವರ್ಗ: ವಾರ್ಷಿಕ ಆದಾಯ ಮಿತಿ 1.50 ಲಕ್ಷ. ಗರಿಷ್ಠ 3 ಲಕ್ಷದವರೆಗಿನ ಘಟಕ ವೆಚ್ಚಕ್ಕೆ ಶೇ. 30ರಷ್ಟು (ಗರಿಷ್ಠ 90 ಸಾವಿರ) ಸಹಾಯಧನ ಸಿಗಲಿದೆ.

ಚೇತನ ಯೋಜನೆ: ದಮನಿತ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 45 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ: 18 ರಿಂದ 55 ವರ್ಷ).

ಧನಶ್ರೀ ಯೋಜನೆ: ಎಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ರೂ.45 ಸಾವಿರ ಪ್ರೋತ್ಸಾಹಧನ ಲಭ್ಯವಿದೆ (ವಯೋಮಿತಿ: 20 ರಿಂದ 55 ವರ್ಷ).

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 45 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ (ವಯೋಮಿತಿ: 20 ರಿಂದ 55 ವರ್ಷ).

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ: 1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಲಾದ ಮಾಜಿ ದೇವದಾಸಿ ಮಹಿಳೆಯರಿಗೆ 45 ಸಾವಿರ ಪ್ರೋತ್ಸಾಹಧನ ದೊರೆಯಲಿದೆ (ವಯೋಮಿತಿ: 20 ರಿಂದ 55 ವರ್ಷ).

*ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ಷರತ್ತುಗಳು:*

ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕು.

ಚೇತನ ಮತ್ತು ಧನಶ್ರೀ ಯೋಜನೆಗಳಿಗೆ ಆಫ್ ಲೈನ್ ನಲ್ಲೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಗತ್ಯ ದಾಖಲೆಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅಥವಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.

ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಆಗಿರಬೇಕು.

ಈ ಹಿಂದೆ ನಿಗಮದ ಯಾವುದೇ ಯೋಜನೆಯಲ್ಲಿ ಪ್ರಯೋಜನ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೆಯೇ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು / ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು / ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತಿçà ಸೇವಾನಿಕೇತನ ಆವರಣ, ದೇವಿನಗರ, ಎಸ್.ಪಿ. ಸರ್ಕಲ್ ಹತ್ತಿರ, ಬಳ್ಳಾರಿ. ಇಲ್ಲಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande