ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, 30 ಅಕ್ಟೋಬರ್ (ಹಿ.ಸ.): ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೃಹ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸಿರುವ ಅವರು, ಮಂಗನ ಕೈಗೆ ಮಾಣಿಕ್ಯ ಸಿಕ್ಕಿದರೆ ಏನಾಗುತ್ತ
ಕೇಂದ್ರ ಸಚಿವ ಕುಮಾರಸ್ವಾಮಿ ಫೈಲ್ ಪೋಟೋ


ಬೆಂಗಳೂರು, 30 ಅಕ್ಟೋಬರ್ (ಹಿ.ಸ.):

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೃಹ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸಿರುವ ಅವರು, ಮಂಗನ ಕೈಗೆ ಮಾಣಿಕ್ಯ ಸಿಕ್ಕಿದರೆ ಏನಾಗುತ್ತದೆ? ಎಂಬ ಗಾದೆಯ ಮೂಲಕ ಇಲಾಖೆಯ ದುಸ್ಥಿತಿಯನ್ನು ಲೇವಡಿ ಮಾಡಿದ್ದಾರೆ. ತುಘಲಕ್ ಕೈಗೆ ಸಿಕ್ಕಿ ಪೊಲೀಸರು ಹೈರಾಣಾಗಿದ್ದಾರೆ ಎಂದು ಟೀಕಿಸಿದ್ದಾರೆ.

ವಿಷಯಾಂತರ ಮಾಡುವುದು ಕಿಡಿಗೇಡಿಗಳ ಲಕ್ಷಣ ಎಂದು ಹೇಳಿರುವ ಕುಮಾರಸ್ವಾಮಿ, ವಿಷಯ ಬಿಟ್ಟು ಬೇರೆ ವಿಚಾರಗಳತ್ತ ಗಮನ ಹರಿಸುವುದೇಕೆ? ನೇರವಾಗಿ ಯುದ್ಧ ಮಾಡಲಿ, ಪಲಾಯನ ಏಕೆ? ಎಂದು ಪ್ರಶ್ನಿಸಿದ್ದಾರೆ.

ಪ್ರಕರಣದ ದಿಕ್ಕು ತಪ್ಪಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು, ತಮ್ಮನ್ನು, ತಮ್ಮ ತಂದೆಯನ್ನು ಹಾಗೂ ಮುಖ್ಯಮಂತ್ರಿಯನ್ನು ಉಲ್ಲೇಖಿಸಿ ಕುತಂತ್ರದ ಆರೋಪ ಮಾಡಿದ್ದಾರೆ. ಈ ಕುತಂತ್ರಕ್ಕೆ ಬಲಿಯಾದವರಿಗೇ ಕ್ಲೀನ್‌ಚಿಟ್ ನೀಡುವುದರಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ತನಿಖೆಯೇ ಸೋರಿಕೆಯಾಗುತ್ತಿದೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ತನಿಖೆಗೆ ಸಂಬಂಧಿಸಿದ ಸುದ್ದಿಗಳು ಸೋರಿಕೆಯಾಗುತ್ತಿರುವುದು ತಮ್ಮ ಅನುಮಾನಕ್ಕೆ ಪುಷ್ಟಿ ನೀಡುತ್ತಿದೆ ಎಂದು ಹೇಳಿದ್ದಾರೆ.

‘ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ’ ಎಂದು ಎಚ್ಚರಿಕೆಯ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande