


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)
ಜಿಲ್ಲಾಡಳಿತದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ವಸತಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 9:15ಕ್ಕೆ ಶ್ರೀ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕರ್ನಾಟಕ ರಾಜ್ಯೋತ್ಸವ ಸಂದೇಶವನ್ನು ನೀಡಲಿದ್ದಾರೆ.
ಈ ಸಮಾರಂಭದಲ್ಲಿ ಸಂಸದರಾದ ಈ.ತುಕಾರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಶಾಸಕ ಹಾಗೂ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ (ಕಾವೇರಿ ಹ್ಯಾಂಡ್ಲ್ಯೂಮ್ಸ್) ಅಧ್ಯಕ್ಷರೂ ಆದ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ. ಅನ್ನಪೂರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಪಿ.ಎಸ್.ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್