ರಾಜ್ಯೋತ್ಸವ : ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ವಿಶೇಷ ಪೂಜೆ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ವಿಶೇಷ ಪೂಜೆ-ಪ್ರಾರ್ಥನೆಗಳನ್ನು ನೆರವೇರಿಸುವಂತೆ ಹಿಂದುಳಿದ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ
ರಾಜ್ಯೋತ್ಸವ : ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ವಿಶೇಷ ಪೂಜೆ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ವಿಶೇಷ ಪೂಜೆ-ಪ್ರಾರ್ಥನೆಗಳನ್ನು ನೆರವೇರಿಸುವಂತೆ ಹಿಂದುಳಿದ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

ನವೆಂಬರ್ 1 ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ತಮ್ಮ ವ್ಯಾಪ್ತಿಯ ದೇವಾಲಯಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಜೊತೆಗೆ ನವೆಂಬರ್ 1 ರಂದು ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande