





ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)
ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ಡಾ. ರಾಜಕುಮಾರ್ ರಸ್ತೆಯ ತಾರಾನಾಥ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಅಲ್ಲಿಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ರೋಗಿಗಳ ಆರೈಕೆಯನ್ನು ಗಮನಿಸಿದ್ದಾರೆ.
ಶಾಸಕ ನಾರಾ ಭರತರೆಡ್ಡಿ ಅವರು ತಾರಾನಾಥ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶುಕ್ರವಾರ ಬೆಳಗ್ಗೆ ಏಕಾಏಕಿ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಕಾಮಗಾರಿಗಳ ಗುಣಮಟ್ಟದ ಕುರಿತು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು. ಅಲ್ಲದೇ, ಆಸ್ಪತ್ರೆಯ ವಾರ್ಡ್ಗಳಿಗೆ ಭೇಟಿ ನೀಡಿ, ರೋಗಿಗಳ ಆರೈಕೆ, ಚಿಕಿತ್ಸೆ, ಔಷಧಿಗಳ ಪೂರೈಕೆ ಕುರಿತು ಮನವರಿಕೆ ಮಾಡಿಕೊಂಡರು.
ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಿಗಳ ದಾಸ್ತಾನು, ರೋಗಿಗಳಿಗೆ ಉಚಿತವಾಗಿ ಪೂರೈಸುತ್ತಿರುವ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದ ಶಾಸಕರು, ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್