
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15 ರಂದು ಎರಡು ದಿನಗಳ ಕಾಲ ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ಪುಸ್ತಕ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ.
ಈ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಇವರನ್ನು ಮೊಬೈಲ್ ಸಂಖ್ಯೆ 9980346474 ಗೆ ಸಂಪರ್ಕ ಮಾಡಲು ಕೋರಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್