
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)
ಬಳ್ಳಾರಿಯ ರೇಡಿಯೋ ಪಾರ್ಕ್ನಲ್ಲಿ ಗುರುವಾರ ರಾತ್ರಿ ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಮೃತನು ಅಬ್ಬು (18). ಅಪಘಾತ ನಡೆದ ಸಂದರ್ಭದಲ್ಲಿ ಅಬ್ಬು ಹೆಲ್ಮೆಟ್ ಧರಿಸಿರಲಿಲ್ಲ. ಅಲ್ಲದೇ, ಟಿಪ್ಪರ್ ಚಾಲಕನು ಅತಿ ವೇಗದ - ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್