ಕಬ್ಬಿಗೆ ₹5,500 ಬೆಲೆ ನಿಗದಿಗೆ ಆಗ್ರಹಿಸಿ ಮಹಾಲಿಂಗಪುರದಲ್ಲಿ ಬೃಹತ್ ಪ್ರತಿಭಟನೆ
ಬಾಗಲಕೋಟೆ, 31 ಅಕ್ಟೋಬರ್ (ಹಿ.ಸ.) ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹5,500 ಸೂಕ್ತ ಬೆಲೆ ನಿಗದಿಪಡಿಸಿ ಸರ್ಕಾರ ಕೂಡಲೇ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಮಹಾಲಿಂಗಪುರ ನಗರದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ಸರ್ಕಲ್ ಹಾಗೂ ಸೈದಾಪುರ–ಸಮೀರವಾಡಿ ಚನ್ನಮ್ಮ ಸರ್ಕಲ್ನ
ಕಬ್ಬು ಹೋರಾಟ


ಬಾಗಲಕೋಟೆ, 31 ಅಕ್ಟೋಬರ್ (ಹಿ.ಸ.)

ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹5,500 ಸೂಕ್ತ ಬೆಲೆ ನಿಗದಿಪಡಿಸಿ ಸರ್ಕಾರ ಕೂಡಲೇ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಮಹಾಲಿಂಗಪುರ ನಗರದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ಸರ್ಕಲ್ ಹಾಗೂ ಸೈದಾಪುರ–ಸಮೀರವಾಡಿ ಚನ್ನಮ್ಮ ಸರ್ಕಲ್ನಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಯಲು ರೈತರು ಮಾಡುತ್ತಿರುವ ವೆಚ್ಚ, ಕೂಲಿ, ರಸಗೊಬ್ಬರ, ಕೀಟನಾಶಕ, ನೀರಾವರಿ ಹಾಗೂ ಸಾಗಾಟ ವೆಚ್ಚಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ಪ್ರಸ್ತುತ ದೊರೆಯುತ್ತಿರುವ ದರ ರೈತರ ಉತ್ಪಾದನಾ ವೆಚ್ಚಕ್ಕೆ ತಕ್ಕಂತೆ ಇಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ರೈತರ ಬೇಡಿಕೆಗೆ ಸ್ಪಂದಿಸಬೇಕು. ರೈತರು ಬೆಳೆದ ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ದೊರೆಯುವಂತೆ ಪ್ರತಿ ಟನ್ಗೆ ₹5,500 ದರ ನಿಗದಿ ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮಾಲತೇಶ ಗಾಣಿಗೇರ, ಕಬ್ಬು ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಉತ್ಪಾದನಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಬೆಲೆ ದೊರೆಯದಿದ್ದರೆ ಕಬ್ಬು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ರೈತರೊಂದಿಗೆ ಚರ್ಚಿಸಿ ನ್ಯಾಯಸಮ್ಮತ ದರ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕಬ್ಬು ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ರೈತರ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande