ಜೆಡಿಎಸ್ನಲ್ಲಿ ಸಂಘಟಕರಿಗೆ ಮನ್ನಣೆ ಇಲ್ಲ, ಪಕ್ಷ ಸಂಘಟನೆ ಕುಂಠಿತ: ಐ.ಎಂ. ತೋರಗಲ್ಲ ಆರೋಪ
ಹುಬ್ಬಳ್ಳಿ, 31 ಅಕ್ಟೋಬರ್ (ಹಿ.ಸ.): ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಪಕ್ಷದ ಸಂಘಟಕರನ್ನು ವರಿಷ್ಠರು ಕಡೆಗಣಿಸುತ್ತಿದ್ದು, ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡುವ ಬದಲು ಪಕ್ಷದ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಜೆಡಿಎಸ್ ಮಾಜಿ ಪ್ರಧಾನ ಕಾರ್
ಐ.ಎಂ. ತೋರಗಲ್ಲ


ಹುಬ್ಬಳ್ಳಿ, 31 ಅಕ್ಟೋಬರ್ (ಹಿ.ಸ.):

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಪಕ್ಷದ ಸಂಘಟಕರನ್ನು ವರಿಷ್ಠರು ಕಡೆಗಣಿಸುತ್ತಿದ್ದು, ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡುವ ಬದಲು ಪಕ್ಷದ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಐ.ಎಂ. ತೋರಗಲ್ಲ ಒತ್ತಾಯಿಸಿದ್ದಾರೆ.

ಈ ಹಿಂದೆ ವಿವಿಧ ಪಕ್ಷಗಳಿಂದ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದ 27 ಟಿಕೆಟ್ ವಂಚಿತ ನಾಯಕರ ಪೈಕಿ 25 ಮಂದಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಇದಕ್ಕೆ ಪಕ್ಷದ ವರಿಷ್ಠರ ನಿರ್ಲಕ್ಷ್ಯವೂ ಒಂದು ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮುಂಬರುವ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡಬೇಕು. ಪಕ್ಷದ ಸಂಘಟನೆ ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಜೆಡಿಎಸ್‌ಗೆ ಮತ್ತಷ್ಟು ಹಿನ್ನಡೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಅವರು ಪಕ್ಷದ ಸಂಘಟನೆಗೆ ತನು, ಮನ, ಧನದಿಂದ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande