ಹಾಲಿನ ಬೆಲೆ ಹೆಚ್ಚಳ ವಿರೋಧಿಸಿ ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾವು ನಗರದ ಗಡಿಗೆ ಚನ್ನಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು. ಪ್ರತಿಭಟನೆಯ ನ
ಹಾಲಿನ ಬೆಲೆ ಹೆಚ್ಚಳ : ಜನವಿರೋಧಿ ನೀತಿ


ಹಾಲಿನ ಬೆಲೆ ಹೆಚ್ಚಳ : ಜನವಿರೋಧಿ ನೀತಿ


ಹಾಲಿನ ಬೆಲೆ ಹೆಚ್ಚಳ : ಜನವಿರೋಧಿ ನೀತಿ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.)

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾವು ನಗರದ ಗಡಿಗೆ ಚನ್ನಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.

ಪ್ರತಿಭಟನೆಯ ನೇತೃತ್ವವಹಿಸಿದ್ದ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿರುವ ಹಂಪಿ ರಮಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು ಮೋಕ ಅವರು, ರಾಜ್ಯ ಸರ್ಕಾರವು ಹಾಲಿನ ಬೆಲೆ ಹೆಚ್ಚಳ ಮಾಡಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆ ಉಂಟು ಮಾಡಿದೆ. ಬೆಲೆ ಏರಿಕೆ - ಬರಗಾಲದಿಂದ ತತ್ತರಿಸಿರುವ ಜನರು ಹಾಲಿನ ಬೆಲೆ ಏರಿಕೆಯಿಂದ ಮತ್ತಷ್ಟು ತತ್ತರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಕ್ಕಿ, ಬೇಳೆ, ಬೆಲ್ಲ, ಅಡುಗೆ ಎಣ್ಣೆ ಹೀಗೇ ಅನೇಕ ಬೆಲೆಗಳು ಹೆಚ್ಚಳವಾಗಿವೆ. ಈಗ, ಹಾಲಿನ ಬೆಲೆ ಹೆಚ್ಚಳ ಆಗಿರುವುದು ಬರೆ-ಹೊರೆಯ ಮೇಲೆ ಮತ್ತಷ್ಟು ಬರೆ ಹಾಕಿದಂತೆ, ಹೊರೆ ಹೇರಿದಂತೆ ಆಗಿದೆ. ಕಾರಣ ಸರ್ಕಾರ ಹೆಚ್ಚಿರುವ ಹಾಲಿನ ಬೆಲೆಯಲ್ಲಿ ಕಡಿಮೆ ಮಾಡಿ, ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು, ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ನಿರಂತರ ಜಾರಿ ಮಾಡುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕಹೊರೆ ಹೇರುತ್ತಲೇ ಇದೆ. ಬರದ ನೆಪದಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚುತ್ತಿದ್ದು, ರೈತರನ್ನು ಸಂಪೂರ್ಣ ಕಡೆಗಣಿಸಿದೆ. ಈಗ, ಹಾಲಿನ ಬೆಲೆಯನ್ನು ಹೆಚ್ಚಳ ಮಾಡಿರುವುದು ಜನವಿರೋಧಿ ನೀತಿಗೆ ಮತ್ತೊಂದು ಸಾಕ್ಷಿಯಾಗಿದೆ ಎಂದರು.

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಶ್ರೀನಿವಾಸ ಮೊತ್ಕರ್, ಪಾಲಿಕೆಯ ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಹನುಮಂತಪ್ಪ, ಬಿಜೆಪಿ ಹಿರಿಯ ಮುಖಂಡರಾದ ಕೆ.ಎ. ರಾಮಲಿಂಗಪ್ಪ, ದಾಸರಿ ಗೋವಿಂದ, ರಾಮಾಂಜಿನೇಯಲು, ಓಂ ಪ್ರಕಾಶ, ಎಚ್.ಎಂ. ಅಡವಿಸ್ವಾಮಿ, ಮಹಿಳಾ ಸದಸ್ಯರಾದ ಸುಗುಣ, ಪುಷ್ಪಾ ಚಂದ್ರಶೇಖರ್, ಅಲಿವೇಲು ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande