
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.)
ವಸತಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ನವೆಂಬರ್ 1 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 1 ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿರುವ ‘71ನೇ ಕನ್ನಡ ರಾಜ್ಯೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಬಳಿಕ ಬೆಳಿಗ್ಗೆ 11:20 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ ಸ್ಟಿಪ್ ನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ಮಧ್ಯಾಹ್ನ 12:15 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟಿಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್