
ಬೆಂಗಳೂರು, 04 ಅಕ್ಟೋಬರ್ (ಹಿ.ಸ.):
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂಬ ಅಮರ ಗೀತೆಯನ್ನು ರಚಿಸಿ, ಕರ್ನಾಟಕ ಏಕೀಕರಣದ ಹೋರಾಟಕ್ಕೆ ಸಾಹಿತ್ಯದ ಶಕ್ತಿ ತುಂಬಿದ ಅಪ್ರತಿಮ ದೇಶಭಕ್ತ ಹುಯಿಲಗೋಳ ನಾರಾಯಣರಾವ್ ಅವರ ಜನ್ಮದಿನದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕಾವ್ಯ ಹಾಗೂ ಸಾಹಿತ್ಯದ ಮೂಲಕ ನಾಡು-ನುಡಿಯ ಕಂಪನ್ನು ಪಸರಿಸಿದ ಹುಯಿಲಗೋಳ ನಾರಾಯಣರಾವ್ ಅವರು ಸ್ವಾತಂತ್ರ್ಯ ಚಳುವಳಿಯಲ್ಲೂ ಸಕ್ರಿಯವಾಗಿ ಪಾಲ್ಗೊಂಡು ಜನರ ಒಗ್ಗಟ್ಟಿಗೆ ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ.
ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಅಹರ್ನಿಶಿ ದುಡಿದ ಈ ಶ್ರೇಷ್ಠ ಸಾಹಿತಿಯ ಸೇವೆ ಹಾಗೂ ಅವರ ಅಪ್ಪಟ ಕನ್ನಡಪ್ರೇಮ ಪ್ರತಿಯೊಬ್ಬ ಕನ್ನಡಿಗನಿಗೂ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.