ಧ್ಯಾನದಿಂದ ಮನಸ್ಸಿಗೆ ನೆಮ್ಮದಿ, ಏಕಾಗ್ರತೆ: ಎಚ್.ಕೆ. ಪಾಟೀಲ
ಗದಗ, 04 ಅಕ್ಟೋಬರ್ (ಹಿ.ಸ.): ನಗರದ ಮುಂಡರಗಿ ರಸ್ತೆಯಲ್ಲಿರುವ ಚಿಕ್ಕಟ್ಟಿ ಶಾಲೆಯ ಸಭಾಂಗಣದಲ್ಲಿ ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ, ಗದಗ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಗದಗ ಧ್ಯಾನ ಮಹಾಯಜ್ಞ–2026’ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಭಾ
ಎಚ್.ಕೆ.ಪಾಟೀಲ


ಗದಗ, 04 ಅಕ್ಟೋಬರ್ (ಹಿ.ಸ.):

ನಗರದ ಮುಂಡರಗಿ ರಸ್ತೆಯಲ್ಲಿರುವ ಚಿಕ್ಕಟ್ಟಿ ಶಾಲೆಯ ಸಭಾಂಗಣದಲ್ಲಿ ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ, ಗದಗ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಗದಗ ಧ್ಯಾನ ಮಹಾಯಜ್ಞ–2026’ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಭಾಗವಹಿಸಿ ಮಾತನಾಡಿದರು.

ಧ್ಯಾನವು ಮನಸ್ಸಿಗೆ ನೆಮ್ಮದಿ, ಏಕಾಗ್ರತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ನೀಡುವುದರ ಜೊತೆಗೆ, ಒತ್ತಡದ ಜೀವನಶೈಲಿಯಿಂದ ಹೊರಬಂದು ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ನೆಮ್ಮದಿಯ ಬದುಕು ನಡೆಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಇಂದಿನ ವೇಗದ ಜೀವನದಲ್ಲಿ ಧ್ಯಾನ ಹಾಗೂ ಆಧ್ಯಾತ್ಮಿಕ ಚಿಂತನೆಯ ಮಹತ್ವವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು ಎಂದು ಎಚ್.ಕೆ. ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಗಣ್ಯರು ಹಾಗೂ ಚಿಕ್ಕಟ್ಟಿ ಸಮೂಹ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande