
ಬಳ್ಳಾರಿ, 05 ಅಕ್ಟೋಬರ್ (ಹಿ.ಸ.)
ವಿದ್ಯುತ್ ಖಾಸಗಿಕರಣ ವಿರೋಧಿಸಿ ಅಕ್ಟೋಬರ್ 8 ರಂದು ಜಿಲ್ಲಾಮಟ್ಟದ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘದ ಜಿಲ್ಲಾ ಘಟಕ ತಿಳಿಸಿದೆ.
ಕರ್ನಾಟಕ ವಿದ್ಯುತ್ ಬಳಕೆದಾರರ ಸಂಘದ ಜಿಲ್ಲಾ ಘಟಕದ ಜಿಲ್ಲಾ ಸಂಚಾಕರಾದ ಆರ್. ಸೋಮನಗೌಡ ಅವರು ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗಿ ಅವರಿಗೆ ಒಪ್ಪಿಸುವ ಹುನ್ನಾರ ಮಾಡುತ್ತಿವೆ. ಭವಿಷ್ಯದಲ್ಲಿ ವಿದ್ಯುತ್ ಶ್ರೀಮಂತರ ಆಸ್ತಿ ಆಗಲಿದೆ ಎಂದು ತಿಳಿಸಿದರು.
ವಿದ್ಯುತ್ ಖಾಸಗೀಕರಣದಿಂದ ದುಡಿಯುವ ಜನರ ಬದುಕು ಕಗ್ಗಂಟಾಗಲಿದೆ. ಪದೇ ಪದೇ ವಿದ್ಯುತ್ ಕಡಿತ, ಬೆಲೆ ಏರಿಕೆ ಇನ್ನಿತರೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುತ್ತದೆ. ಸಮಾವೇಶವು ಸಂಘದ ಕಟ್ಟಡದಲ್ಲಿ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಲು ಮುಕ್ತ ಅವಕಾಶವಿದೆ ಎಂದು ಅವರು ತಿಳಿಸಿದರು.
ಸಂಘದ ಮುಖಂಡರಾದ ಎ.ಶಾಂತಾ, ಸದಸ್ಯರಾದ ಗುರಳ್ಳಿ ರಾಜ, ಕಿರಣ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್