ಭಾರತ–ಸ್ವಿಟ್ಜರ್ಲ್ಯಾಂಡ್ ನಡುವೆ ಸಾರಿಗೆ, ವಲಸೆ, ಸಂಶೋಧನೆ ಕ್ಷೇತ್ರಗಳಲ್ಲಿ ಐದು ಒಪ್ಪಂದ
ನವದೆಹಲಿ, 05 ಅಕ್ಟೋಬರ್ (ಹಿ.ಸ.): ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವೆ ಸಾರಿಗೆ, ಚಲನಶೀಲತೆ ಮತ್ತು ಮೂಲಸೌಕರ್ಯ, ವಲಸೆ ಮತ್ತು ಚಲನಶೀಲತೆ ಹಾಗೂ ಯುವ ವೃತ್ತಿಪರರಿಗೆ ಸಂಬಂಧಿಸಿದಂತೆ ಸೋಮವಾರ ಐದು ಹೊಸ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಆರೋಗ್ಯ, ಸ್ವಚ್ಛ ಇಂಧನ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ
संयुक्त प्रेस वक्तव्य के दौरान समझौतों के आदान-प्रदान के साक्षी बनते भारत के प्रधानमंत्री और स्विट्जरलैंड के राष्ट्रपति


ನವದೆಹಲಿ, 05 ಅಕ್ಟೋಬರ್ (ಹಿ.ಸ.):

ಭಾರತ ಮತ್ತು ಸ್ವಿಟ್ಜರ್‌ಲ್ಯಾಂಡ್ ನಡುವೆ ಸಾರಿಗೆ, ಚಲನಶೀಲತೆ ಮತ್ತು ಮೂಲಸೌಕರ್ಯ, ವಲಸೆ ಮತ್ತು ಚಲನಶೀಲತೆ ಹಾಗೂ ಯುವ ವೃತ್ತಿಪರರಿಗೆ ಸಂಬಂಧಿಸಿದಂತೆ ಸೋಮವಾರ ಐದು ಹೊಸ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಆರೋಗ್ಯ, ಸ್ವಚ್ಛ ಇಂಧನ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಜಂಟಿ ಸಂಶೋಧನೆ ನಡೆಸುವ ಬಗ್ಗೆಯೂ ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ. ಜತೆಗೆ ಶಾಂತಿ, ರಾಜತಾಂತ್ರಿಕತೆ ಮತ್ತು ಜಾಗತಿಕ ಸಂಸ್ಥೆಗಳ ಸುಧಾರಣೆಯ ಬದ್ಧತೆಯನ್ನು ಪುನರುಚ್ಚರಿಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್ ಅಧ್ಯಕ್ಷ ಗೈ ಪಾರ್ಮೆಲಿನ್ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಿದರು. ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಎಲ್ಲ ಆಯಾಮಗಳನ್ನು ಪರಿಶೀಲಿಸಿ, ವ್ಯಾಪಾರ ಮತ್ತು ಹೂಡಿಕೆ, ನವೋದ್ಯಮ ಮತ್ತು ಕೃತಕ ಬುದ್ಧಿಮತ್ತೆ, ಸೇನಾ ವಿನಿಮಯ ಮತ್ತು ರಕ್ಷಣಾ ಉತ್ಪಾದನೆ, ಪರಮಾಣು ಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜನರ ನಡುವಿನ ಬಾಂಧವ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚಿಸಿದರು.

ಭಾರತದ ರಫ್ತು ಉತ್ಪನ್ನಗಳಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವುದು ಹಾಗೂ ಉಭಯ ದೇಶಗಳ ನಡುವಿನ ಹೂಡಿಕೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಭಾರತದ ಕೃಷಿ, ಔಷಧ, ಜವಳಿ ಮತ್ತು ಎಂಜಿನಿಯರಿಂಗ್ ಉತ್ಪನ್ನಗಳ ಸ್ವಿಟ್ಜರ್‌ಲ್ಯಾಂಡ್‌ಗೆ ರಫ್ತು ಹೆಚ್ಚುವ ನಿರೀಕ್ಷೆಯಿದೆ. ಜತೆಗೆ ಜೈವಿಕ ತಂತ್ರಜ್ಞಾನ, ಜೀವ ವಿಜ್ಞಾನ, ಬ್ಯಾಂಕಿಂಗ್, ವಿಮೆ, ಆಹಾರ ಸಂಸ್ಕರಣೆ ಮತ್ತು ಸುಸ್ಥಿರತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸ್ವಿಸ್ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಕ್ಕೂ ಒತ್ತು ನೀಡಲಾಗಿದೆ.

ಭಾರತ–ಯುರೋಪಿಯನ್ ಮುಕ್ತ ವ್ಯಾಪಾರ ಸಂಘದ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಆರ್ಥಿಕ ಸಹಕಾರಕ್ಕೆ ದೊರೆತಿರುವ ಸಕಾರಾತ್ಮಕ ವೇಗವನ್ನು ಉಭಯ ನಾಯಕರು ಸ್ವಾಗತಿಸಿದರು. ನವೋದ್ಯಮ ಆಧಾರಿತ ಪಾಲುದಾರಿಕೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಹಕಾರದಲ್ಲಿ ಆಯೋಜಿಸಲಾಗಿರುವ ಭಾರತ–ಸ್ವಿಟ್ಜರ್‌ಲ್ಯಾಂಡ್ ಸಂಶೋಧನಾ ಪ್ರಮುಖ ಕಾರ್ಯಕ್ರಮದ ಉದ್ಘಾಟನಾ ಅಧಿವೇಶನವನ್ನು ಕೂಡ ಘೋಷಿಸಲಾಯಿತು. ಆರೋಗ್ಯ, ಸ್ವಚ್ಛ ಇಂಧನ ಮತ್ತು ಬಾಹ್ಯಾಕಾಶದಂತಹ ಆದ್ಯತೆಯ ಕ್ಷೇತ್ರಗಳಲ್ಲಿ ಶೀಘ್ರದಲ್ಲೇ ಜಂಟಿ ಸಂಶೋಧನಾ ಯೋಜನೆಗಳನ್ನು ಆರಂಭಿಸುವುದಾಗಿ ಸ್ವಿಟ್ಜರ್‌ಲ್ಯಾಂಡ್ ಅಧ್ಯಕ್ಷ ಗೈ ಪಾರ್ಮೆಲಿನ್ ತಿಳಿಸಿದರು.

ಭಾರತೀಯ ವಿಜ್ಞಾನ ಕ್ಷೇತ್ರದ ನವೋದ್ಯಮಗಳ ಸಾಮರ್ಥ್ಯವರ್ಧನೆಗಾಗಿ ಜ್ಯೂರಿಕ್ ವಿಶ್ವವಿದ್ಯಾಲಯದೊಂದಿಗೆ ಮಾಡಿಕೊಂಡಿರುವ ಒಪ್ಪಂದವನ್ನು ಸ್ವಾಗತಿಸಲಾಗಿದೆ. ಯೋಗ ಮತ್ತು ಆಯುರ್ವೇದದ ಹೆಚ್ಚುತ್ತಿರುವ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸುವ ಬಗ್ಗೆಯೂ ಸಕಾರಾತ್ಮಕ ಚರ್ಚೆ ನಡೆದಿದೆ.

ಕೃತಕ ಬುದ್ಧಿಮತ್ತೆ ಕ್ಷೇತ್ರದ ಸಹಕಾರದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಫೆಬ್ರವರಿಯಲ್ಲಿ ಭಾರತವು ವಿಶ್ವದ ಅತಿದೊಡ್ಡ ಕೃತಕ ಬುದ್ಧಿಮತ್ತೆ ಶೃಂಗಸಭೆಯನ್ನು ಆಯೋಜಿಸಿತ್ತು. ಮುಂದಿನ ವರ್ಷ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆಯಲಿರುವ ಕೃತಕ ಬುದ್ಧಿಮತ್ತೆ ಶೃಂಗಸಭೆಯ ಮೂಲಕ ಈ ಪ್ರಯಾಣವನ್ನು ಮುಂದುವರಿಸಲಾಗುವುದು. ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತ, ಸಮಗ್ರ ಮತ್ತು ಮಾನವಕೇಂದ್ರಿತವಾಗಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಒಟ್ಟಾಗಿ ಮುಂದುವರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾಗತಿಕ ಶಾಂತಿ ಮತ್ತು ಸ್ಥಿರತೆಗಾಗಿ ಒಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲು ಉಭಯ ದೇಶಗಳು ನಿರ್ಧರಿಸಿವೆ. ಹೆಚ್ಚುತ್ತಿರುವ ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆ ಅಗತ್ಯವಿದೆ ಎಂಬುದನ್ನೂ ಎರಡೂ ದೇಶಗಳು ಒಪ್ಪಿಕೊಂಡಿವೆ.

ಸೇನಾ ವಿನಿಮಯ ಮತ್ತು ರಕ್ಷಣಾ ಉತ್ಪಾದನೆಯಲ್ಲಿ ಸಹಕಾರದ ಹೊಸ ಅವಕಾಶಗಳನ್ನು ಗುರುತಿಸಲಾಗಿದೆ. ಪರಮಾಣು ಶಕ್ತಿ ಕ್ಷೇತ್ರದಲ್ಲಿನ ಸಹಕಾರವನ್ನು ಮತ್ತಷ್ಟು ಆಳಗೊಳಿಸುವ ಬಗ್ಗೆಯೂ ಒಪ್ಪಿಗೆ ವ್ಯಕ್ತವಾಗಿದೆ.

ವಾರಾಣಸಿಯ ರೋಪ್‌ವೇ, ನೋಯ್ಡಾದ ಜೆವಾರ್ ವಿಮಾನ ನಿಲ್ದಾಣ ಹಾಗೂ ಪರ್ವತ ಪ್ರದೇಶಗಳಲ್ಲಿನ ರೈಲು ಮತ್ತು ಸುರಂಗ ನಿರ್ಮಾಣ ಯೋಜನೆಗಳು ಭಾರತ–ಸ್ವಿಟ್ಜರ್‌ಲ್ಯಾಂಡ್ ನಡುವಿನ ಮೂಲಸೌಕರ್ಯ ಸಹಕಾರದ ಉತ್ತಮ ಉದಾಹರಣೆಗಳಾಗಿವೆ ಎಂದು ಅಧ್ಯಕ್ಷ ಗೈ ಪಾರ್ಮೆಲಿನ್ ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande