ಅರ್ಜಿ ನಮೂನೆ-7 ದುರುಪಯೋಗ: ಸಾಕ್ಷ್ಯ ಸಹಿತ ದೂರು, ಪರಮೇಶ್ವರ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ಮತದಾರರ ಪಟ್ಟಿಗೆ ಸಂಬಂಧಿಸಿದ ಅರ್ಜಿ ನಮೂನೆ-7ರ ದುರುಪಯೋಗದ ಕುರಿತು ಚುನಾವಣಾ ಆಯೋಗಕ್ಕೆ ಸಾಕ್ಷ್ಯ ಸಹಿತ ದೂರು ನೀಡಲಾಗಿದೆ. ಪ್ರಕರಣದಲ್ಲಿ ಗುರುತಿಸಲಾಗಿರುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಒತ್ತಾಯಿಸಿದರು
ಡಿಸಿಎಂ ಪರಮೇಶ್ವರ


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ಮತದಾರರ ಪಟ್ಟಿಗೆ ಸಂಬಂಧಿಸಿದ ಅರ್ಜಿ ನಮೂನೆ-7ರ ದುರುಪಯೋಗದ ಕುರಿತು ಚುನಾವಣಾ ಆಯೋಗಕ್ಕೆ ಸಾಕ್ಷ್ಯ ಸಹಿತ ದೂರು ನೀಡಲಾಗಿದೆ. ಪ್ರಕರಣದಲ್ಲಿ ಗುರುತಿಸಲಾಗಿರುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಒತ್ತಾಯಿಸಿದರು.

ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರ್ಜಿ ನಮೂನೆ-7 ಅನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಸಾಕ್ಷ್ಯ ಸಹಿತ ಪತ್ತೆಹಚ್ಚಿ ಚುನಾವಣಾ ಆಯೋಗಕ್ಕೆ ನೀಡಲಾಗಿದೆ ಎಂದರು.

ಒಬ್ಬ ವ್ಯಕ್ತಿ ಎಷ್ಟು ಅರ್ಜಿ ನಮೂನೆ-7 ಸಲ್ಲಿಸಬಹುದು ಎಂಬುದಕ್ಕೆ ಮಿತಿ ಇಲ್ಲವೇ? ಒಬ್ಬರೇ 100, 200 ಅಥವಾ 400 ಅರ್ಜಿಗಳನ್ನು ಸಲ್ಲಿಸಿದರೆ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಒಂದೇ ಸಮುದಾಯದವರನ್ನು ಗುರುತಿಸಿಕೊಂಡು ಅರ್ಜಿಗಳನ್ನು ಎಲ್ಲಿಯೋ ಮುದ್ರಿಸಿ ತರಲಾಗುತ್ತಿದೆ. ಅವರ ಹೆಸರು ಹಾಗೂ ಮತದಾರರ ಗುರುತಿನ ಚೀಟಿ ವಿವರಗಳನ್ನು ಮುದ್ರಿತ ಅರ್ಜಿಗಳಲ್ಲಿ ನಮೂದಿಸಿ ಸಲ್ಲಿಸಲಾಗುತ್ತಿದೆ. ಅವರ ಮಾಹಿತಿ ಯಾರಿಂದ ದೊರೆಯಿತು ಮತ್ತು ಎಲ್ಲಿಂದ ಲಭ್ಯವಾಯಿತು ಎಂಬುದನ್ನು ಪರಿಶೀಲಿಸಬೇಕಿದೆ. ಇಂತಹ ಕ್ರಮ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಈ ಎಲ್ಲ ವಿಚಾರಗಳನ್ನು ಸಾಕ್ಷ್ಯ ಸಹಿತ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಆಯೋಗವು ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಏಳು ದಿನಗಳ ಕಾಲಾವಕಾಶ ನೀಡಿದೆ. ಬಳಿಕ ಎಫ್‌ಐಆರ್ ದಾಖಲಿಸುವುದಾಗಿ ತಿಳಿಸಿದೆ. ಆಯೋಗವು ತನ್ನ ಹೇಳಿಕೆಯಂತೆ ಕ್ರಮ ಕೈಗೊಂಡು, ಗುರುತಿಸಿ ನೀಡಿರುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಪರಮೇಶ್ವರ ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande